Gold Prices: ಚಿನ್ನ, ಬೆಳ್ಳಿ ಇನ್ಮುಂದೆ ಬೆಲೆ ಏರಿಕೆ ಹಬ್ಬ; ಬೆಂಗಳೂರು, ಭಾರತ ಹಾಗೂ ವಿಶ್ವದ ವಿವಿಧೆಡೆ ಚಿನ್ನದ ದರ?

Bullion Market 2023, April 15th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಕೂಡ ತುಸು ಏರಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಚಿನ್ನ, ಬೆಳ್ಳಿ ಇನ್ಮುಂದೆ ಬೆಲೆ ಏರಿಕೆ ಹಬ್ಬ; ಬೆಂಗಳೂರು, ಭಾರತ ಹಾಗೂ ವಿಶ್ವದ ವಿವಿಧೆಡೆ ಚಿನ್ನದ ದರ?
ಚಿನ್ನ

Updated on: Apr 15, 2023 | 5:01 AM

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 14ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,650 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,960 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚು ನೆಲಸಿರುವ ದುಬೈ, ಅಮೆರಿಕ, ಸಿಂಗಾಪುರ ಮೊದಲಾದ ದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರೂ ಇದೆ.

ಬೆಂಗಳೂರು: ದೇಶ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ (Gold and Silver Prices) ಬೆಲೆ ಹೆಚ್ಚುತ್ತಿದೆ. ಏಪ್ರಿಲ್ 13ರಂದು ತುಸು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರುಗತಿಯಲ್ಲಿದೆ. ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ 500ಕ್ಕೂ ಹೆಚ್ಚು ರುಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ 10 ಗ್ರಾಮ್​ಗೆ 16 ರೂನಷ್ಟು ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,960 ರುಪಾಯಿಗೆ ಏರಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಗೆ ಏರಿಕೆ ಕಂಡಿದೆ.

ಚಿನ್ನದ ಬೆಲೆ ಏರಿಕೆಗೆ ಏನು ಕಾರಣ?

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ. ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಅಲ್ಲಿನವರು ಷೇರು ಹಾಗೂ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿ: Profitable Shares: ಬ್ರೋಕರ್​ಗಳ ಟಾಪ್ ಫೇವರಿಟ್; ಒಂದೂವರೆ ವರ್ಷಕ್ಕೆ ಹಣ ಡಬಲ್ ಮಾಡುವ ಷೇರು; 5 ವರ್ಷದೊಳಗೆ 2 ಪಟ್ಟು ಹೆಚ್ಚು ರಿಟರ್ನ್ಸ್ ಕೊಡುವ ಷೇರುಗಳು

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 15ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 796 ರೂ

ಬೆಂಗಳೂರಿನಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,300 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,150 ರೂ
  • ಜೈಪುರ್: 56,700 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ಇದನ್ನೂ ಓದಿ: Infosys: ಇನ್ಫೋಸಿಸ್ ಷೇರು ಡಿವಿಡೆಂಡ್; ಅಕ್ಷತಾ ಮೂರ್ತಿಗೆ ಸಿಗುವ ಹಣ ಎಷ್ಟು? ಕಂಪನಿ ಲಾಭ ಎಷ್ಟು? ಯಾರ ಬಳಿ ಎಷ್ಟೆಷ್ಟು ಷೇರುಗಳಿವೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (53,265 ರುಪಾಯಿ)
  • ದುಬೈ: 2282.50 ಡಿರಾಮ್ (50,735 ರುಪಾಯಿ)
  • ಅಮೆರಿಕ: 625 ಡಾಲರ್ (51,044 ರುಪಾಯಿ)
  • ಸಿಂಗಾಪುರ: 842 ಸಿಂಗಾಪುರ್ ಡಾಲರ್ (51,872 ರುಪಾಯಿ)
  • ಕತಾರ್: 2,350 ಕತಾರಿ ರಿಯಾಲ್ (52,738 ರೂ)
  • ಓಮನ್: 249 ಒಮಾನಿ ರಿಯಾಲ್ (52,849 ರುಪಾಯಿ)
  • ಕುವೇತ್: 194.50 ಕುವೇತಿ ದಿನಾರ್ (51,943 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 8,300 ರೂ
  • ಮುಂಬೈ: 7,960 ರೂ
  • ದೆಹಲಿ: 7,960 ರೂ
  • ಕೋಲ್ಕತಾ: 7,960 ರೂ
  • ಕೇರಳ: 8,300 ರೂ
  • ಅಹ್ಮದಾಬಾದ್: 7,960 ರೂ
  • ಜೈಪುರ್: 7,960 ರೂ
  • ಲಕ್ನೋ: 7,960 ರೂ
  • ಭುವನೇಶ್ವರ್: 8,300 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us