AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 16th April: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 April 16th: ಚಿನ್ನದ ಬೆಲೆ ಕಳೆದ ಒಂದೂವರೆ ತಿಂಗಳಲ್ಲಿ ಗ್ರಾಮ್​ಗೆ 1,000 ರೂ ಸಮೀಪದಷ್ಟು ಏರಿಕೆ ಆಗಿದೆ. ಈಗ ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 86 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,465 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16th April: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 16, 2024 | 5:17 AM

Share

ಬೆಂಗಳೂರು, ಏಪ್ರಿಲ್ 16: ಅನಿಶ್ಚಿತ ವಾತಾವರಣದ ಮಧ್ಯೆ ಚಿನ್ನ ಮತ್ತು ಬೆಳ್ಳಿಗಳಿಗೆ ಬೇಡಿಕೆ ಮುಂದುವರಿದೆ. ಚಿನ್ನದ ಬೆಲೆ (Gold and silver Rates) ಗ್ರಾಮ್​ಗೆ 65 ರೂನಷ್ಟು ಏರಿದೆ. ಮಾರ್ಚ್​ನಿಂದ ಈಚೆಗೆ 47 ದಿನದಲ್ಲಿ 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 57,590 ರೂನಿಂದ 67,050 ರೂಗೆ ಏರಿದೆ. ಕೇವಲ ಒಂದೂವರೆ ತಿಂಗಳ ಅಂತರದಲ್ಲಿ ಗ್ರಾಮ್​ಗೆ 1,000 ರೂ ಸಮೀಪದಷ್ಟು ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಕೂಡ ಹಿಂದೆಂದಿಗಿಂತಲೂ ವೇಗವಾಗಿ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,465 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 846.5 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,050 ರೂ
  • ಚೆನ್ನೈ: 67,900 ರೂ
  • ಮುಂಬೈ: 67,050 ರೂ
  • ದೆಹಲಿ: 67,200 ರೂ
  • ಕೋಲ್ಕತಾ: 67,050 ರೂ
  • ಕೇರಳ: 67,050 ರೂ
  • ಅಹ್ಮದಾಬಾದ್: 67,100 ರೂ
  • ಜೈಪುರ್: 67,200 ರೂ
  • ಲಕ್ನೋ: 67,200 ರೂ
  • ಭುವನೇಶ್ವರ್: 67,050 ರೂ

ಇದನ್ನೂ ಓದಿ: ಇಪಿಎಫ್ ಖಾತೆ ವಿಲೀನಗೊಳಿಸಬಹುದು, ಆದರೆ ಎರಡು ಯುಎಎನ್ ಸಂಖ್ಯೆ ಸೇರಿಸಲು ಸಾಧ್ಯವಾ? ಇಲ್ಲಿದೆ ಕ್ರಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,590 ರಿಂಗಿಟ್ (62,695 ರುಪಾಯಿ)
  • ದುಬೈ: 2,632.50 ಡಿರಾಮ್ (59,814 ರುಪಾಯಿ)
  • ಅಮೆರಿಕ: 715 ಡಾಲರ್ (59,661 ರುಪಾಯಿ)
  • ಸಿಂಗಾಪುರ: 1,000 ಸಿಂಗಾಪುರ್ ಡಾಲರ್ (61,343 ರುಪಾಯಿ)
  • ಕತಾರ್: 2,690 ಕತಾರಿ ರಿಯಾಲ್ (61,546 ರೂ)
  • ಸೌದಿ ಅರೇಬಿಯಾ: 2,700 ಸೌದಿ ರಿಯಾಲ್ (60,059 ರುಪಾಯಿ)
  • ಓಮನ್: 285 ಒಮಾನಿ ರಿಯಾಲ್ (61,769 ರುಪಾಯಿ)
  • ಕುವೇತ್: 224.50 ಕುವೇತಿ ದಿನಾರ್ (60,811 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,465 ರೂ
  • ಚೆನ್ನೈ: 8,950 ರೂ
  • ಮುಂಬೈ: 8,600 ರೂ
  • ದೆಹಲಿ: 8,600 ರೂ
  • ಕೋಲ್ಕತಾ: 8,600 ರೂ
  • ಕೇರಳ: 8,950 ರೂ
  • ಅಹ್ಮದಾಬಾದ್: 8,600 ರೂ
  • ಜೈಪುರ್: 8,600 ರೂ
  • ಲಕ್ನೋ: 8,600 ರೂ
  • ಭುವನೇಶ್ವರ್: 8,950 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ