AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Prices: ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ ಕಡಿಮೆ; ಭಾರತ ಮೊದಲಾದೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?

Bullion Market 2023, April 18th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,940 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,030 ರುಪಾಯಿ ಆಗಿದೆ. ಬೆಳ್ಳಿ ಬೆಲೆ ನಿನ್ನೆಯ ದರದಲ್ಲಿ ಯಥಾಸ್ಥಿತಿಯಲ್ಲಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಅಮೆರಿಕ, ದುಬೈನಲ್ಲಿ ಚಿನ್ನದ ಬೆಲೆ ಕಡಿಮೆ; ಭಾರತ ಮೊದಲಾದೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 18, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 18ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,940 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚು ನೆಲಸಿರುವ ದುಬೈ ಮೊದಲಾದ ಯುಎಇ ನಗರಗಳಲ್ಲಿ, ಮಲೇಷ್ಯಾ, ಸಿಂಗಾಪುರ, ಅಮೆರಿಕ, ಕುವೇತ್ ಮೊದಲಾದ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ವ್ಯತ್ಯಯವಾಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,990 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,160 ರೂ ಇದೆ.

ಬೆಂಗಳೂರು: ಕಳೆದ ವಾರ ಭಾರೀ ಏರಿಳಿತಗಳನ್ನು ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇದೀಗ ಸ್ತಬ್ಧಗೊಂಡು ಯಥಾಸ್ಥಿತಿಯಲ್ಲಿದೆ. ಇತ್ತೀಚೆಗೆ ನೂರು ಗ್ರಾಮ್​ಗೆ ಐದು ಸಾವಿರ ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇದೀಗ ಭಾರತೀಯ ಚಿನಿವಾರಪೇಟೆಯಲ್ಲಿ ನಿನ್ನೆ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿವೆ. ಇಂದು ಬೆಳಗಿನ ವಹಿವಾಟು ಬಳಿಕ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರುಗತಿಗೆ ಹೋಗುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,940 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,030 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,990 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,150 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿ: Gold at Home: ಚಿನ್ನ ಪ್ರಿಯರೇ ಇಲ್ನೋಡಿ..! ಮನೆಯಲ್ಲಿ ನೀವು ಎಷ್ಟು ಚಿನ್ನ ಇಟ್ಟುಕೊಳ್ಳಬಹುದು ಗೊತ್ತಾ? ಸರ್ಕಾರದ ನಿಯಮ ತಿಳಿದಿರಿ

ಭಾರತದಲ್ಲಿರುವ ಬೆಲೆ (ಏಪ್ರಿಲ್ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,940 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,030 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿರುವ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,990 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,080 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 816 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,990 ರೂ
  • ಚೆನ್ನೈ: 56,500 ರೂ
  • ಮುಂಬೈ: 55,940 ರೂ
  • ದೆಹಲಿ: 56,090 ರೂ
  • ಕೋಲ್ಕತಾ: 55,940 ರೂ
  • ಕೇರಳ: 55,940 ರೂ
  • ಅಹ್ಮದಾಬಾದ್: 55,990 ರೂ
  • ಜೈಪುರ್: 56,090 ರೂ
  • ಲಕ್ನೋ: 56,090 ರೂ
  • ಭುವನೇಶ್ವರ್: 55,940 ರೂ

ಇದನ್ನೂ ಓದಿ: Infosys: ಭರ್ಜರಿ ಷೇರು ಡಿವಿಡೆಂಡ್ ಕೊಟ್ಟ ಇನ್ಫೋಸಿಸ್​ಗೆ ಸಂಕಷ್ಟ; ಕೆಲವೇ ಗಂಟೆಯಲ್ಲಿ ಷೇರುಪೇಟೆಯಲ್ಲಿ 75,000 ಕೋಟಿ ರೂ ನಷ್ಟ; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,670 ರುಪಾಯಿ)
  • ದುಬೈ: 2255 ಡಿರಾಮ್ (50,357 ರುಪಾಯಿ)
  • ಅಮೆರಿಕ: 615 ಡಾಲರ್ (50,422 ರುಪಾಯಿ)
  • ಸಿಂಗಾಪುರ: 830 ಸಿಂಗಾಪುರ್ ಡಾಲರ್ (51,123 ರುಪಾಯಿ)
  • ಕತಾರ್: 2,320 ಕತಾರಿ ರಿಯಾಲ್ (52,256 ರೂ)
  • ಓಮನ್: 244.50 ಒಮಾನಿ ರಿಯಾಲ್ (52,087 ರುಪಾಯಿ)
  • ಕುವೇತ್: 192 ಕುವೇತಿ ದಿನಾರ್ (51,425 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,160 ರೂ
  • ಚೆನ್ನೈ: 8,160 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,160 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,160 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ