AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Prices: ಚಿನ್ನ, ಬೆಳ್ಳಿ ಎರಡೂ ಇಳಿಕೆ, ಭಾರತ, ಅಮೆರಿಕ, ದುಬೈ ಮೊದಲಾದೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?

Bullion Market 2023, April 19th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,920 ರುಪಾಯಿಗೆ ಇಳಿದಿದೆ. ನಿನ್ನೆ ಯಥಾಸ್ಥಿತಿಯಲ್ಲಿದ್ದ ಬೆಳ್ಳಿ ಬೆಲೆ ಇದೀಗ ತುಸು ಇಳಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಚಿನ್ನ, ಬೆಳ್ಳಿ ಎರಡೂ ಇಳಿಕೆ, ಭಾರತ, ಅಮೆರಿಕ, ದುಬೈ ಮೊದಲಾದೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ದರ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 19, 2023 | 5:03 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 18ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,850 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರೂ ಇದೆ.
  • ಮಲೇಷ್ಯಾ ಹೊರತುಪಡಿಸಿ ಅನಿವಾಸಿ ಭಾರತೀಯರು ಹೆಚ್ಚು ನೆಲಸಿರುವ ದುಬೈ, ಸಿಂಗಾಪುರ, ಅಮೆರಿಕ, ಕುವೇತ್ ಮೊದಲಾದ ಕಡೆ ಚಿನ್ನದ ಬೆಲೆ 52,000 ರೂ ಮಟ್ಟಕ್ಕಿಂತ ಕೆಳಗಿವೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,050 ರೂ ಇದೆ.

ಬೆಂಗಳೂರು: ಹಲವು ಏರಿಳಿತ ಕಂಡು ಯಥಾಸ್ಥಿತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏಪ್ರಿಲ್ 19ರಂದು ಇಳಿಕೆ ಕಂಡಿವೆ. ಚಿನ್ನೆ ಬೆಲೆ ಗ್ರಾಮ್​ಗೆ 9 ರೂನಷ್ಟು ಕುಸಿತ ಕಂಡಿದೆ. ಇತ್ತೀಚೆಗೆ ನೂರು ಗ್ರಾಮ್​ಗೆ ಐದು ಸಾವಿರ ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಇದೀಗ ಭಾರತೀಯ ಚಿನಿವಾರಪೇಟೆಯಲ್ಲಿ ನಿನ್ನೆ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ನಿನ್ನೆ ಬೆಳಗಿನ ವಹಿವಾಟು ಬಳಿಕ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರುಗತಿಗೆ ಹೋಗತೊಡಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,920 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,050 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿApple: ಅ್ಯಪಲ್ ಕಾರ್ಡ್​ನಲ್ಲಿ ಸೇವಿಂಗ್ಸ್ ಅಕೌಂಟ್; 10 ಪಟ್ಟು ಹೆಚ್ಚು ಬಡ್ಡಿ; ಅಮೆರಿಕದ ಹಣಕಾಸು ಕ್ಷೇತ್ರದಲ್ಲಿ ಸಂಚಲನ?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳೀ ಬೆಲೆ (ಏಪ್ರಿಲ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,920 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 774 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,900 ರೂ
  • ಚೆನ್ನೈ: 56,450 ರೂ
  • ಮುಂಬೈ: 55,850 ರೂ
  • ದೆಹಲಿ: 56,000 ರೂ
  • ಕೋಲ್ಕತಾ: 55,850 ರೂ
  • ಕೇರಳ: 55,850 ರೂ
  • ಅಹ್ಮದಾಬಾದ್: 55,900 ರೂ
  • ಜೈಪುರ್: 56,000 ರೂ
  • ಲಕ್ನೋ: 56,000 ರೂ
  • ಭುವನೇಶ್ವರ್: 55,850 ರೂ

ಇದನ್ನೂ ಓದಿCoca Cola: ಸ್ವಿಗ್ಗಿ, ಜೊಮಾಟೋಗೆ ಸೆಡ್ಡು ಹೊಡೆಯಲು ಬರುತ್ತಿದೆಯಾ ಕೋಕಾ ಕೋಲ? ಥ್ರೈವ್ ಜೊತೆ ನಿಂತ ಕೋಲಾ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,540 ರುಪಾಯಿ)
  • ದುಬೈ: 2247.50 ಡಿರಾಮ್ (50,204 ರುಪಾಯಿ)
  • ಅಮೆರಿಕ: 610 ಡಾಲರ್ (50,040 ರುಪಾಯಿ)
  • ಸಿಂಗಾಪುರ: 830 ಸಿಂಗಾಪುರ್ ಡಾಲರ್ (51,116 ರುಪಾಯಿ)
  • ಕತಾರ್: 2,305 ಕತಾರಿ ರಿಯಾಲ್ (51,936 ರೂ)
  • ಓಮನ್: 244 ಒಮಾನಿ ರಿಯಾಲ್ (51,994 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,872 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,050 ರೂ
  • ಚೆನ್ನೈ: 8,050 ರೂ
  • ಮುಂಬೈ: 7,740 ರೂ
  • ದೆಹಲಿ: 7,740 ರೂ
  • ಕೋಲ್ಕತಾ: 7,740 ರೂ
  • ಕೇರಳ: 8,050 ರೂ
  • ಅಹ್ಮದಾಬಾದ್: 7,740 ರೂ
  • ಜೈಪುರ್: 7,740 ರೂ
  • ಲಕ್ನೋ: 7,740 ರೂ
  • ಭುವನೇಶ್ವರ್: 8,050 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್