AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ದುಬೈನಲ್ಲಿ 50 ಸಾವಿರಕ್ಕಿಂತ ಕಡಿಮೆಗೆ ಇಳಿದ ಚಿನ್ನದ ಬೆಲೆ; ಭಾರತದಲ್ಲಿ ಚಿನ್ನ, ಬೆಳ್ಳಿ ಎರಡೂ ತುಟ್ಟಿ

Bullion Market 2023, April 20th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,050 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,150 ರುಪಾಯಿಗೆ ಇಳಿದಿದೆ. ನಿನ್ನೆ ಯಥಾಸ್ಥಿತಿಯಲ್ಲಿದ್ದ ಬೆಳ್ಳಿ ಬೆಲೆ ಇದೀಗ ತುಸು ಇಳಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ದುಬೈನಲ್ಲಿ 50 ಸಾವಿರಕ್ಕಿಂತ ಕಡಿಮೆಗೆ ಇಳಿದ ಚಿನ್ನದ ಬೆಲೆ; ಭಾರತದಲ್ಲಿ ಚಿನ್ನ, ಬೆಳ್ಳಿ ಎರಡೂ ತುಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 20, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 18ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,050 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರೂ ಇದೆ.
  • ಅನಿವಾಸಿ ಭಾರತೀಯರು ನೆಲಸಿರುವ ಪ್ರದೇಶಗಳ ಪೈಕಿ ದುಬೈನಲ್ಲಿ ಚಿನ್ನದ ಬೆಲೆ 50,000 ರೂ ಗಡಿಗಿಂತ ಕೆಳಗೆ ಇಳಿದಿದೆ. ಉಳಿದ ಕಡೆಯೂ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,100 ರೂ ಇದೆ.

ಬೆಂಗಳೂರು: ನಿನ್ನೆ (ಏಪ್ರಿಲ್ 19) 9ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಏಪ್ರಿಲ್ 20ರಂದು ತುಸು ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ನಿನ್ನೆ ಬೆಳಗಿನ ವಹಿವಾಟು ಬಳಿಕ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರುಗತಿಗೆ ಹೋಗತೊಡಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಭಾರತದ ವಿವಿಧೆಡೆ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,050 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,050 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿPM Kisan Yojana: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಮಾಡಬೇಕಾದ ಕೆಲಸಗಳಿವು

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 20ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,100 ರೂ
  • ಚೆನ್ನೈ: 56,650 ರೂ
  • ಮುಂಬೈ: 56,050 ರೂ
  • ದೆಹಲಿ: 56,200 ರೂ
  • ಕೋಲ್ಕತಾ: 56,050 ರೂ
  • ಕೇರಳ: 56,050 ರೂ
  • ಅಹ್ಮದಾಬಾದ್: 56,100 ರೂ
  • ಜೈಪುರ್: 56,200 ರೂ
  • ಲಕ್ನೋ: 56,200 ರೂ
  • ಭುವನೇಶ್ವರ್: 56,050 ರೂ

ಇದನ್ನೂ ಓದಿMeta Layoffs: ವಾಟ್ಸಾಪ್, ಫೇಸ್​ಬುಕ್​ನಿಂದ 3ನೇ ಸುತ್ತಿನ ಲೇ ಆಫ್; ತಲೆ ಮೇಲೆ ಕೈಹೊತ್ತ ಮೆಟಾ ಉದ್ಯೋಗಿಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,543 ರುಪಾಯಿ)
  • ದುಬೈ: 2217.50 ಡಿರಾಮ್ (49,651 ರುಪಾಯಿ)
  • ಅಮೆರಿಕ: 615 ಡಾಲರ್ (50,569 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,108 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,500 ರೂ)
  • ಓಮನ್: 244.50 ಒಮಾನಿ ರಿಯಾಲ್ (52,222 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,953 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,100 ರೂ
  • ಚೆನ್ನೈ: 8,100 ರೂ
  • ಮುಂಬೈ: 7,760 ರೂ
  • ದೆಹಲಿ: 7,760 ರೂ
  • ಕೋಲ್ಕತಾ: 7,760 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,760 ರೂ
  • ಜೈಪುರ್: 7,760 ರೂ
  • ಲಕ್ನೋ: 7,760 ರೂ
  • ಭುವನೇಶ್ವರ್: 8,100 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!