ಬೆಂಗಳೂರು: ನಿನ್ನೆ (ಏಪ್ರಿಲ್ 19) 9ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಏಪ್ರಿಲ್ 20ರಂದು ತುಸು ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ನಿನ್ನೆ ಬೆಳಗಿನ ವಹಿವಾಟು ಬಳಿಕ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರುಗತಿಗೆ ಹೋಗತೊಡಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಭಾರತದ ವಿವಿಧೆಡೆ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,050 ರುಪಾಯಿ ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,050 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು.
ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಮಾಡಬೇಕಾದ ಕೆಲಸಗಳಿವು
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Meta Layoffs: ವಾಟ್ಸಾಪ್, ಫೇಸ್ಬುಕ್ನಿಂದ 3ನೇ ಸುತ್ತಿನ ಲೇ ಆಫ್; ತಲೆ ಮೇಲೆ ಕೈಹೊತ್ತ ಮೆಟಾ ಉದ್ಯೋಗಿಗಳು