Gold Rates: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಅರಬ್ ದೇಶಗಳಲ್ಲಿ ತುಸು ಏರಿಕೆ, ಅಮೆರಿಕದಲ್ಲಿ ಬೆಲೆ ಇಳಿಕೆ

Bullion Market 2023, April 21st: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿಗೆ ಇಳಿದಿದೆ. ನಿನ್ನೆ ಚಿನ್ನದ ಜೊತೆ ಬೆಲೆ ಏರಿಕೆ ಕಂಡಿದ್ದ ಬೆಳ್ಳಿಯ ದರವೂ ಇಂದು ಇಳಿದಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಅರಬ್ ದೇಶಗಳಲ್ಲಿ ತುಸು ಏರಿಕೆ, ಅಮೆರಿಕದಲ್ಲಿ ಬೆಲೆ ಇಳಿಕೆ
ಚಿನ್ನ

Updated on: Apr 21, 2023 | 5:00 AM

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 21ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,850 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರೂ ಇದೆ.
  • ವಿದೇಶೀ ಮಾರುಕಟ್ಟೆಗಳ ಪೈಕಿ ಸಿಂಗಾಪುರ, ಕುವೇತ್, ದುಬೈ ಮತ್ತು ಅಮೆರಿಕದಲ್ಲಿ ಚಿನ್ನದ ಬೆಲೆ 51,000 ರೂ ಮಟ್ಟಕ್ಕಿಂತ ಕಡಿಮೆ ಇದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,100 ರೂ ಇದೆ.

ಬೆಂಗಳೂರು: ಭಾರತದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿಕೆಗಳಾಗಿವೆ. ನಿನ್ನೆ ದುಬೈನಲ್ಲಿ 50,000 ರೂ ಗಡಿಯೊಳಗೆ ಇಳಿದಿದ್ದ ಚಿನ್ನದ ಬೆಲೆ ಇದೀಗ ಮತ್ತೆ 50,000 ಗಡಿ ದಾಟಿ ಹೋಗಿದೆ. ಅಮೆರಿಕದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಕಂಡು 50 ಸಾವಿರ ರೂ ಸಮೀಪಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,740 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,100 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿPAN, Aadhaar: ನಿಮ್ಮ ಪ್ಯಾನ್ ಮತ್ತು ಆಧಾರ್ ಕಾರ್ಡ್ ದುರ್ಬಳಕೆ ಆಗದೇ ಸುರಕ್ಷಿತವಾಗಿರುವಂತೆ ಏನು ಮಾಡಬೇಕು?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 774 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,900 ರೂ
  • ಚೆನ್ನೈ: 56,500 ರೂ
  • ಮುಂಬೈ: 55,850 ರೂ
  • ದೆಹಲಿ: 56,000 ರೂ
  • ಕೋಲ್ಕತಾ: 55,850 ರೂ
  • ಕೇರಳ: 55,850 ರೂ
  • ಅಹ್ಮದಾಬಾದ್: 55,900 ರೂ
  • ಜೈಪುರ್: 56,000 ರೂ
  • ಲಕ್ನೋ: 56,000 ರೂ
  • ಭುವನೇಶ್ವರ್: 55,850 ರೂ

ಇದನ್ನೂ ಓದಿDhingra Brothers: ಮಲ್ಯ ಒಡೆತನದ ಸಂಸ್ಥೆ ಖರೀದಿಸಿದ ಧಿಂಗ್ರಾ ಬ್ರದರ್ಸ್; 16 ಕೋಟಿ ಇದ್ದ ಕಂಪನಿ ಬ್ಯುಸಿನೆಸ್ ಈಗ 55,000 ಕೋಟಿ ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,543 ರುಪಾಯಿ)
  • ದುಬೈ: 2237.50 ಡಿರಾಮ್ (50,053 ರುಪಾಯಿ)
  • ಅಮೆರಿಕ: 610 ಡಾಲರ್ (50,108 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,974 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (51,904 ರೂ)
  • ಓಮನ್: 243.50 ಒಮಾನಿ ರಿಯಾಲ್ (51,959 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,953 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,100 ರೂ
  • ಚೆನ್ನೈ: 8,100 ರೂ
  • ಮುಂಬೈ: 7,740 ರೂ
  • ದೆಹಲಿ: 7,740 ರೂ
  • ಕೋಲ್ಕತಾ: 7,740 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,740 ರೂ
  • ಜೈಪುರ್: 7,740 ರೂ
  • ಲಕ್ನೋ: 7,740 ರೂ
  • ಭುವನೇಶ್ವರ್: 8,100 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us