Gold Rates: ಭಾರತದಲ್ಲಿ ಚಿನ್ನ, ಬೆಳ್ಳಿ ಮತ್ತೆ ತುಸು ತುಟ್ಟಿ; ದುಬೈನಲ್ಲಿ 50,000 ರೂ ಗಡಿಯೊಳಗೆ ಚಿನ್ನದ ಬೆಲೆ; ಎಲ್ಲೆಲ್ಲಿ ಎಷ್ಟಿದೆ ದರ, ಇಲ್ಲಿದೆ ಪಟ್ಟಿ

Bullion Market 2023, April 22nd: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,050 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,150 ರುಪಾಯಿಗೆ ಏರಿದೆ. ಬೆಳ್ಳಿ ಬೆಲೆಯೂ ಭಾರತದ ವಿವಿಧೆಡೆ ಏರಿಕೆಯಾಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಭಾರತದಲ್ಲಿ ಚಿನ್ನ, ಬೆಳ್ಳಿ ಮತ್ತೆ ತುಸು ತುಟ್ಟಿ; ದುಬೈನಲ್ಲಿ 50,000 ರೂ ಗಡಿಯೊಳಗೆ ಚಿನ್ನದ ಬೆಲೆ; ಎಲ್ಲೆಲ್ಲಿ ಎಷ್ಟಿದೆ ದರ, ಇಲ್ಲಿದೆ ಪಟ್ಟಿ
ಚಿನ್ನ

Updated on: Apr 22, 2023 | 5:00 AM

ಬೆಂಗಳೂರು: ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಚಿನ್ನ ಮತ್ತು ಬೆಳ್ಳಿ ಬೆಲೆಯ ತೂಗುಯ್ಯಾಲೆ ಆಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ (Gold Rates) ಹೊಯ್ದಾಟಗಳಾಗಿವೆ. ಶುಕ್ರವಾರ ಇಳಿಕೆ ಕಂಡು ತುಸು ಏರಿದ್ದ ಚಿನ್ನದ ಬೆಲೆ ಶನಿವಾರ 200 ರೂನಷ್ಟು ಏರಿದೆ. ಬೆಳ್ಳಿ ಬೆಲೆಯಲ್ಲೂ (Silver Price) ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,050 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,150 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,130 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು.

ಇದನ್ನೂ ಓದಿGold Loans: ಶೇ. 10ಕ್ಕಿಂತಲೂ ಕಡಿಮೆ ಬಡ್ಡಿಗೆ ಸಾಲ? ಅತಿ ಕಡಿಮೆ ಬಡ್ಡಿಗೆ ಗೋಲ್ಡ್ ಲೋನ್ ಕೊಡುವ ಬ್ಯಾಂಕುಗಳಿವು

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 813 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,100 ರೂ
  • ಚೆನ್ನೈ: 56,650 ರೂ
  • ಮುಂಬೈ: 56,050 ರೂ
  • ದೆಹಲಿ: 56,200 ರೂ
  • ಕೋಲ್ಕತಾ: 56,050 ರೂ
  • ಕೇರಳ: 56,050 ರೂ
  • ಅಹ್ಮದಾಬಾದ್: 56,100 ರೂ
  • ಜೈಪುರ್: 56,200 ರೂ
  • ಲಕ್ನೋ: 56,200 ರೂ
  • ಭುವನೇಶ್ವರ್: 56,050 ರೂ

ಇದನ್ನೂ ಓದಿCredit Card: ಕ್ರೆಡಿಟ್ ಕಾರ್ಡ್ ಯಾಕೆ ಮುಖ್ಯ? ಎಚ್ಚರ ವಹಿಸಬೇಕಾದ ಸಂಗತಿಗಳೇನು? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,521 ರುಪಾಯಿ)
  • ದುಬೈ: 2227.50 ಡಿರಾಮ್ (49,783 ರುಪಾಯಿ)
  • ಅಮೆರಿಕ: 615 ಡಾಲರ್ (50,484 ರುಪಾಯಿ)
  • ಸಿಂಗಾಪುರ: 830 ಸಿಂಗಾಪುರ್ ಡಾಲರ್ (51,040 ರುಪಾಯಿ)
  • ಕತಾರ್: 2,320 ಕತಾರಿ ರಿಯಾಲ್ (52,303 ರೂ)
  • ಓಮನ್: 244 ಒಮಾನಿ ರಿಯಾಲ್ (52,020 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,901 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,130 ರೂ
  • ಚೆನ್ನೈ: 8,130 ರೂ
  • ಮುಂಬೈ: 7,760 ರೂ
  • ದೆಹಲಿ: 7,760 ರೂ
  • ಕೋಲ್ಕತಾ: 7,760 ರೂ
  • ಕೇರಳ: 8,130 ರೂ
  • ಅಹ್ಮದಾಬಾದ್: 7,760 ರೂ
  • ಜೈಪುರ್: 7,760 ರೂ
  • ಲಕ್ನೋ: 7,760 ರೂ
  • ಭುವನೇಶ್ವರ್: 8,130 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us