AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22nd April: ಈ ವಾರ ಚಿನ್ನದ ಬೆಲೆ ಇನ್ನಷ್ಟು ಮೇಲೇರುತ್ತದಾ? ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 April 22nd: ಕಳೆದ ಎರಡು ವಾರಗಳಿಗೆ ಹೋಲಿಸಿದರೆ ಚಿನ್ನದ ಬೆಲೆ ಈ ವಾರ ಏರಿಕೆ ಆಗುವ ಸಾಧ್ಯತೆ ಕಡಿಮೆ ಇದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,240 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 86.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 68,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22nd April: ಈ ವಾರ ಚಿನ್ನದ ಬೆಲೆ ಇನ್ನಷ್ಟು ಮೇಲೇರುತ್ತದಾ? ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 22, 2024 | 5:00 AM

Share

ಬೆಂಗಳೂರು, ಏಪ್ರಿಲ್ 22: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರ ಹೆಚ್ಚು ಏರಿಕೆ ಆಗುವ ಸಾಧ್ಯತೆ ಕಡಿಮೆ ಇದೆ. ಕಳೆದ ಎರಡು ತಿಂಗಳಿಂದ ಚಿನ್ನದ ಬೆಲೆ ಜಾಗತಿಕವಾಗಿ ಭರ್ಜರಿ ಏರಿಕೆ ಆಗಿದೆ. ಇದೀಗ ಇಸ್ರೇಲ್ ಮತ್ತು ಇರಾನ್ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧಕ್ಕೆ ತಿರುಗುವ ಸಾಧ್ಯತೆ ಕಡಿಮೆ ಇರುವುದರಿಂದ ಚಿನ್ನಕ್ಕೆ ಮುಗಿಬೀಳುವವರ ಸಂಖ್ಯೆ ಕಡಿಮೆ ಆಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,050 ರೂ
  • ಚೆನ್ನೈ: 68,850 ರೂ
  • ಮುಂಬೈ: 68,050 ರೂ
  • ದೆಹಲಿ: 68,200 ರೂ
  • ಕೋಲ್ಕತಾ: 68,050 ರೂ
  • ಕೇರಳ: 68,050 ರೂ
  • ಅಹ್ಮದಾಬಾದ್: 68,100 ರೂ
  • ಜೈಪುರ್: 68,200 ರೂ
  • ಲಕ್ನೋ: 68,200 ರೂ
  • ಭುವನೇಶ್ವರ್: 68,050 ರೂ

ಇದನ್ನೂ ಓದಿ: ನಾನು ನಂದಿನಿ, ಅಮೆರಿಕಾಗೆ ಬಂದಿವ್ನಿ… ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,650 ರಿಂಗಿಟ್ (63,612 ರುಪಾಯಿ)
  • ದುಬೈ: 2,682.50 ಡಿರಾಮ್ (60,896 ರುಪಾಯಿ)
  • ಅಮೆರಿಕ: 730 ಡಾಲರ್ (60,864 ರುಪಾಯಿ)
  • ಸಿಂಗಾಪುರ: 1,014 ಸಿಂಗಾಪುರ್ ಡಾಲರ್ (62,086 ರುಪಾಯಿ)
  • ಕತಾರ್: 2,730 ಕತಾರಿ ರಿಯಾಲ್ (62,407 ರೂ)
  • ಸೌದಿ ಅರೇಬಿಯಾ: 2,740 ಸೌದಿ ರಿಯಾಲ್ (60,896 ರುಪಾಯಿ)
  • ಓಮನ್: 289 ಒಮಾನಿ ರಿಯಾಲ್ (62,589 ರುಪಾಯಿ)
  • ಕುವೇತ್: 227 ಕುವೇತಿ ದಿನಾರ್ (61,375 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,600 ರೂ
  • ಚೆನ್ನೈ: 9,000 ರೂ
  • ಮುಂಬೈ: 8,650 ರೂ
  • ದೆಹಲಿ: 8,650 ರೂ
  • ಕೋಲ್ಕತಾ: 8,650 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,650 ರೂ
  • ಜೈಪುರ್: 8,650 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 9,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ