ಬೆಂಗಳೂರು, ಏಪ್ರಿಲ್ 22: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರ ಹೆಚ್ಚು ಏರಿಕೆ ಆಗುವ ಸಾಧ್ಯತೆ ಕಡಿಮೆ ಇದೆ. ಕಳೆದ ಎರಡು ತಿಂಗಳಿಂದ ಚಿನ್ನದ ಬೆಲೆ ಜಾಗತಿಕವಾಗಿ ಭರ್ಜರಿ ಏರಿಕೆ ಆಗಿದೆ. ಇದೀಗ ಇಸ್ರೇಲ್ ಮತ್ತು ಇರಾನ್ ಸಂಘರ್ಷ ಪೂರ್ಣ ಪ್ರಮಾಣದ ಯುದ್ಧಕ್ಕೆ ತಿರುಗುವ ಸಾಧ್ಯತೆ ಕಡಿಮೆ ಇರುವುದರಿಂದ ಚಿನ್ನಕ್ಕೆ ಮುಗಿಬೀಳುವವರ ಸಂಖ್ಯೆ ಕಡಿಮೆ ಆಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ನಾನು ನಂದಿನಿ, ಅಮೆರಿಕಾಗೆ ಬಂದಿವ್ನಿ… ಟಿ20 ವಿಶ್ವಕಪ್ನಲ್ಲಿ ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ