Kannada News Business Gold Prices April 23rd 2024, Gold Silver Rates Slide Down on Monday
Gold Silver Price on 23rd April: ತಗ್ಗಿದ ಚಿನ್ನ, ಬೆಳ್ಳಿ ಬೆಲೆ ಏರಿಕೆ ಬಿಸಿ; ಇಲ್ಲಿದೆ ವಿವರ
Bullion Market 2024 April 23rd: ಚಿನ್ನದ ಬೆಲೆಯ ನಿರಂತರ ಏರಿಕೆಗೆ ಬ್ರೇಕ್ ಬಿದ್ದಿದೆ. ಚಿನ್ನ, ಬೆಳ್ಳಿ ಎರಡರ ಬೆಲೆಯೂ ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 85.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 67,550 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಏಪ್ರಿಲ್ 23: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಬಹಳ ದಿನಗಳ ಬಳಿಕ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ತಗ್ಗಿದೆ. ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ಚಿನ್ನದ ಬೆಲೆ ತಾತ್ಕಾಲಿಕ ವಿರಾಮ ಪಡೆದುಕೊಂಡಂತಿದೆ. ಜನವರಿ 1ರಿಂದೀಚೆ ಚಿನ್ನದ ಬೆಲೆಯಲ್ಲಿ ಶೇ. 15ರಷ್ಟು ಹೆಚ್ಚಳವಾಗಿದೆ. ಏಪ್ರಿಲ್ ತಿಂಗಳ ಮೊದಲ ಮೂರು ವಾರದಲ್ಲೇ ಶೇ. 7.60ರಷ್ಟು ಚಿನ್ನದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 23ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)