ಬೆಂಗಳೂರು, ಏಪ್ರಿಲ್ 24: ಮೂರು ವಾರಗಳಿಂದ ಭರ್ಜರಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರ ಇಳಿಕೆಯ ಹಾದಿಯಲ್ಲಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 140 ರೂನಷ್ಟು ಕುಸಿತ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಎರಡೂವರೆ ರೂನಷ್ಟು ತಗ್ಗಿದೆ. ಸಾವರೀನ್ ಗೋಲ್ಡ್ ಬಾಂಡ್ ಸ್ಕೀಮ್ನಲ್ಲಿ 2017-18ರ ನಾಲ್ಕನೇ ಸರಣಿ ಹಾಗೂ 2018-19ರ ಮೂರನೇ ಸರಣಿಯಲ್ಲಿ ಹಣ ತೊಡಗಿಸಿಕೊಂಡವರಿಗೆ ಬಂಪರ್ ರಿಟರ್ನ್ ಸಿಗುತ್ತಿದೆ. ಐದು ವರ್ಷಗಳಿಗೆ ಪ್ರೀಮೆಚ್ಯೂರ್ ಆಗಿ ರಿಡಂಪ್ಷನ್ ಪಡೆದವರಿಗೆ ಒಳ್ಳೆಯ ಲಾಭ ಆಗಲಿದೆ. ಇಸ್ರೇಲ್ ಮತ್ತು ಇರಾನ್ ಯುದ್ಧದಂತಹ ಅತಿರೇಕದ ನಿರ್ಧಾರಕ್ಕೆ ಹೋಗದೇ ಹೋದ್ದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಶಾಂತಿ ಕದಡುವ ಸಾಧ್ಯತೆ ಕಡಿಮೆ. ಹೀಗಾಗಿ, ಹೂಡಿಕೆದಾರರಲ್ಲಿ ಚಿನ್ನದ ಮೇಲಿನ ಬೇಡಿಕೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,590 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಸಾವರೀನ್ ಗೋಲ್ಡ್ ಬಾಂಡ್: ಅವಧಿಪೂರ್ವ ಬೆಲೆ ಘೋಷಿಸಿದ ಆರ್ಬಿಐ; ಹೂಡಿಕೆದಾರರಿಗೆ ಸಿಗುವ ಲಾಭ ಎಷ್ಟು ನೋಡಿ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ