Gold Rates: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಇನ್ನಷ್ಟು ಅಗ್ಗ; ಅಮೆರಿಕ, ದುಬೈನಲ್ಲಿ 50,000 ರೂ ಒಳಗೆ ಇಳಿದ ಗೋಲ್ಡ್ ಪ್ರೈಸ್

Bullion Market 2023, April 25th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,710 ರುಪಾಯಿಗೆ ಇಳಿದಿದೆ. ಬೆಳ್ಳಿ ಬೆಲೆಯೂ ಭಾರತದ ವಿವಿಧೆಡೆ ಇಳಿಕೆಯಾಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಇನ್ನಷ್ಟು ಅಗ್ಗ; ಅಮೆರಿಕ, ದುಬೈನಲ್ಲಿ 50,000 ರೂ ಒಳಗೆ ಇಳಿದ ಗೋಲ್ಡ್ ಪ್ರೈಸ್
ಚಿನ್ನ

Updated on: Apr 25, 2023 | 5:13 AM

ಬೆಂಗಳೂರು: ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಅಪರಂಜಿ ಚಿನ್ನವೂ 61,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಬೆಳ್ಳಿ ಬೆಲೆಯಲ್ಲೂ (Silver Price) ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿGold Prediction: ಇನ್ನೊಂದು ವರ್ಷದಲ್ಲಿ ಚಿನ್ನದ ಬೆಲೆ ಎಷ್ಟು ಹೆಚ್ಚಾಗುತ್ತದೆ? ನಿಮ್ಮ ಹಣ ಎಷ್ಟು ಬೆಳೆಯುತ್ತದೆ? ಇಲ್ಲಿದೆ ಡೀಟೇಲ್ಸ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,700 ರೂ
  • ಚೆನ್ನೈ: 56,150 ರೂ
  • ಮುಂಬೈ: 55,650 ರೂ
  • ದೆಹಲಿ: 55,750 ರೂ
  • ಕೋಲ್ಕತಾ: 55,650 ರೂ
  • ಕೇರಳ: 55,650 ರೂ
  • ಅಹ್ಮದಾಬಾದ್: 55,700 ರೂ
  • ಜೈಪುರ್: 55,750 ರೂ
  • ಲಕ್ನೋ: 55,750 ರೂ
  • ಭುವನೇಶ್ವರ್: 55,650 ರೂ

ಇದನ್ನೂ ಓದಿGold Loans: ಶೇ. 10ಕ್ಕಿಂತಲೂ ಕಡಿಮೆ ಬಡ್ಡಿಗೆ ಸಾಲ? ಅತಿ ಕಡಿಮೆ ಬಡ್ಡಿಗೆ ಗೋಲ್ಡ್ ಲೋನ್ ಕೊಡುವ ಬ್ಯಾಂಕುಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,374 ರುಪಾಯಿ)
  • ದುಬೈ: 2227.50 ಡಿರಾಮ್ (49,692 ರುಪಾಯಿ)
  • ಅಮೆರಿಕ: 610 ಡಾಲರ್ (49,965 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,510 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (51,529 ರೂ)
  • ಓಮನ್: 241.50 ಒಮಾನಿ ರಿಯಾಲ್ (51,388 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,817 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,000 ರೂ
  • ಮುಂಬೈ: 7,640 ರೂ
  • ದೆಹಲಿ: 7,640 ರೂ
  • ಕೋಲ್ಕತಾ: 7,640 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,640 ರೂ
  • ಜೈಪುರ್: 7,640 ರೂ
  • ಲಕ್ನೋ: 7,640 ರೂ
  • ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us