Gold Rates: ಬೆಲೆ ಏರಿಕೆಯ ಹಳಿಗೆ ಜಾರಿದ ಚಿನ್ನ ಮತ್ತು ಬೆಳ್ಳಿ; ದೇಶ ವಿದೇಶಗಳಲ್ಲಿ ಹಳದಿ ಲೋಹ ತುಸು ದುಬಾರಿ

Bullion Market 2023, April 26th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿಗೆ ಏರಿದೆ. ಬೆಳ್ಳಿ ಬೆಲೆಯೂ ಭಾರತದ ವಿವಿಧೆಡೆ ಏರಿಕೆಯಾಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಬೆಲೆ ಏರಿಕೆಯ ಹಳಿಗೆ ಜಾರಿದ ಚಿನ್ನ ಮತ್ತು ಬೆಳ್ಳಿ; ದೇಶ ವಿದೇಶಗಳಲ್ಲಿ ಹಳದಿ ಲೋಹ ತುಸು ದುಬಾರಿ
ಚಿನ್ನ

Updated on: Apr 26, 2023 | 5:01 AM

ಬೆಂಗಳೂರು: ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ನಿರಂತರವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕುದುರಿಸಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಹೆಚ್ಚಾದರೂ 56,000 ರೂ ಮಟ್ಟಕ್ಕಿಂತ ಕೆಳಗೆಯೇ ಇದೆ. ಅಪರಂಜಿ ಚಿನ್ನವೂ 61,000 ರೂ ಮಟ್ಟಕ್ಕಿಂತ ಕೆಳಗೆ ಇದೆ. ಚಿನ್ನದಂತೆ ಬೆಳ್ಳಿ ಬೆಲೆಯೂ (Silver Price) ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,850 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,670 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,070 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿHigh Returns: ಸುಳ್ಳಲ್ಲ; 2-4 ವರ್ಷಕ್ಕೆ ಹಣ ಡಬಲ್ ಮಾಡುತ್ತಿರುವ ಮ್ಯೂಚುವಲ್ ಫಂಡ್ ಸ್ಕೀಮ್​ಗಳಿವು; ಶುರುವಾದಾಗಿನಿಂದ ಇವುಗಳ ರಿಟರ್ನ್ಸ್ ಶೇ. 20ಕ್ಕಿಂತ ಕೆಳಗಿಳಿದೇ ಇಲ್ಲ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 767 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 807 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,900 ರೂ
  • ಚೆನ್ನೈ: 56,300 ರೂ
  • ಮುಂಬೈ: 55,850 ರೂ
  • ದೆಹಲಿ: 56,000 ರೂ
  • ಕೋಲ್ಕತಾ: 55,850 ರೂ
  • ಕೇರಳ: 55,850 ರೂ
  • ಅಹ್ಮದಾಬಾದ್: 55,900 ರೂ
  • ಜೈಪುರ್: 56,000 ರೂ
  • ಲಕ್ನೋ: 56,000 ರೂ
  • ಭುವನೇಶ್ವರ್: 55,850 ರೂ

ಇದನ್ನೂ ಓದಿAirtel 5G Data Plans: ಏರ್​ಟೆಲ್ ಹೊಸ ಪ್ಲಾನ್​ಗಳು; ಅನ್​ಲಿಮಿಟೆಡ್ 5ಜಿ ಡಾಟಾ, ಅಮೇಜಾನ್ ಪ್ರೈಮ್, ಡಿಸ್ನಿ ಹಾಟ್​ಸ್ಟಾರ್ ಉಚಿತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,337 ರುಪಾಯಿ)
  • ದುಬೈ: 2232.50 ಡಿರಾಮ್ (49,811 ರುಪಾಯಿ)
  • ಅಮೆರಿಕ: 610 ಡಾಲರ್ (49,967 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,698 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (51,763 ರೂ)
  • ಓಮನ್: 243 ಒಮಾನಿ ರಿಯಾಲ್ (51,717 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,843 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,070 ರೂ
  • ಚೆನ್ನೈ: 8,070 ರೂ
  • ಮುಂಬೈ: 7,670 ರೂ
  • ದೆಹಲಿ: 7,670 ರೂ
  • ಕೋಲ್ಕತಾ: 7,670 ರೂ
  • ಕೇರಳ: 8,070 ರೂ
  • ಅಹ್ಮದಾಬಾದ್: 7,670 ರೂ
  • ಜೈಪುರ್: 7,670 ರೂ
  • ಲಕ್ನೋ: 7,670 ರೂ
  • ಭುವನೇಶ್ವರ್: 8,070 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us