Gold Silver Price on 26th April: ಇಳಿಕೆಯ ಹಾದಿಗೆ ಮರಳಿದ ಚಿನ್ನದ ಬೆಲೆ; ಬೆಳ್ಳಿ ಬೆಲೆಯೂ ಕಡಿಮೆ
Bullion Market 2024 April 26th: ಚಿನ್ನದ ಬೆಲೆ ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 82.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 66,250 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಏಪ್ರಿಲ್ 26: ಇಂದು ಶುಕ್ರವಾರ ಚಿನ್ನ ಮತ್ತು ಬೆಳ್ಳಿ (Gold and silver Rates) ಎರಡೂ ಬೆಲೆ ಕಡಿಮೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ತಗ್ಗಿದರೆ, ಬೆಳ್ಳಿ ಬೆಲೆ 40 ಪೈಸೆ ಇಳಿಕೆ ಆಗಿದೆ. ನಿನ್ನೆ ಚಿನ್ನದ ಬೆಲೆ ತುಸು ಹೆಚ್ಚಾಗಿದ್ದು ಬಿಟ್ಟರೆ ಈ ವಾರ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ ಸತತವಾಗಿ ತಗ್ಗುತ್ತಿದೆ. ವಿದೇಶಗಳಲ್ಲಿ ಕೆಲವು ಕಡೆ ಚಿನ್ನದ ಬೆಲೆ ಹೆಚ್ಚಾದರೆ, ಇನ್ನೂ ಕೆಲ ಕಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 26ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 825 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)