AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ ಇನ್ನಷ್ಟು ದುಬಾರಿ; ಬೆಳ್ಳಿ ಇಳಿದರೂ ಸ್ವರ್ಣ ಲೋಹಕ್ಕೆ ಹೆಚ್ಚಿದ ಬೇಡಿಕೆ; ಭಾರತದ ವಿವಿಧಡೆ ಇವತ್ತು ಎಷ್ಟಿದೆ ಬೆಲೆ?

Bullion Market 2023, April 27th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿಗೆ ಏರಿದೆ. ಬೆಳ್ಳಿ ಬೆಲೆ ಭಾರತದ ವಿವಿಧೆಡೆ ತುಸು ಇಳಿಕೆ ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನ ಇನ್ನಷ್ಟು ದುಬಾರಿ; ಬೆಳ್ಳಿ ಇಳಿದರೂ ಸ್ವರ್ಣ ಲೋಹಕ್ಕೆ ಹೆಚ್ಚಿದ ಬೇಡಿಕೆ; ಭಾರತದ ವಿವಿಧಡೆ ಇವತ್ತು ಎಷ್ಟಿದೆ ಬೆಲೆ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 27, 2023 | 5:03 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 27ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,950 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರೂ ಇದೆ.
  • ವಿದೇಶೀ ಮಾರುಕಟ್ಟೆಗಳಲ್ಲಿ ಎಲ್ಲೆಡೆಯೂ ಚಿನ್ನದ ಬೆಲೆ ಏರಿದೆ. ಅಮೆರಿಕ ಮತ್ತು ದುಬೈನಲ್ಲಿ ಏರಿಕೆಯಾದರೂ ಚಿನ್ನದ ಬೆಲೆ 50,000 ರೂ ಮಟ್ಟಕ್ಕಿಂತ ಕೆಳಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,020 ರೂ ಇದೆ.

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಓಟ ಮುಂದುವರಿದಿದೆ. ಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ನಿರಂತರವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿಗೆ ಮತ್ತೆ ಬೇಡಿಕೆ ಕುದುರಿದೆ. ಏಪ್ರಿಲ್ 27ರಂದು ಚಿನ್ನ ತುಸು ಏರಿಕೆ ಕಂಡರೆ, ಬೆಳ್ಳಿ ಬೆಲೆ ಅಲ್ಪಪ್ರಮಾಣದಲ್ಲಿ ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ (22 ಕ್ಯಾರಟ್) 56,000 ರೂಗೆ ಅಗುದಿಸಮೀಪ ಇದೆ. 1ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,020 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: OTT Rate Hike: ಅಮೇಜಾನ್ ಪ್ರೈಮ್ ದರ ಏರಿಕೆ; ಇದರ ಹಿಂದಿದೆಯಾ ಬ್ಯುಸಿನೆಸ್ ತಂತ್ರ? ಇತರ ಒಟಿಟಿಗಳಿಂದಲೂ ಶೀಘ್ರದಲ್ಲೇ ಬೆಲೆ ಏರಿಕೆ ಸಾಧ್ಯತೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 802 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,000 ರೂ
  • ಚೆನ್ನೈ: 56,420 ರೂ
  • ಮುಂಬೈ: 55,950 ರೂ
  • ದೆಹಲಿ: 56,100 ರೂ
  • ಕೋಲ್ಕತಾ: 55,950 ರೂ
  • ಕೇರಳ: 55,950 ರೂ
  • ಅಹ್ಮದಾಬಾದ್: 56,000 ರೂ
  • ಜೈಪುರ್: 56,100 ರೂ
  • ಲಕ್ನೋ: 56,100 ರೂ
  • ಭುವನೇಶ್ವರ್: 55,950 ರೂ

ಇದನ್ನೂ ಓದಿ: Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (52,345 ರುಪಾಯಿ)
  • ದುಬೈ: 2242.50 ಡಿರಾಮ್ (49,920 ರುಪಾಯಿ)
  • ಅಮೆರಿಕ: 610 ಡಾಲರ್ (49,966 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (50,954 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (51,637 ರೂ)
  • ಓಮನ್: 243.50 ಒಮಾನಿ ರಿಯಾಲ್ (51,673 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,733 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,020 ರೂ
  • ಚೆನ್ನೈ: 8,020 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 8,020 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ