AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ದೇಶ ವಿದೇಶಗಳಲ್ಲಿ ಮುಂದುವರಿದ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ದುಬೈನಲ್ಲಿ ಬಹಳ ಕಡಿಮೆ; ಎಲ್ಲೆಲ್ಲಿ ಎಷ್ಟಿದೆ ದರ? ಇಲ್ಲಿದೆ ವಿವರ

Bullion Market 2023, April 29th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,750 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,820 ರುಪಾಯಿಗೆ ಇಳಿದಿದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಗ್ರಾಮ್​ಗೆ 30 ಪೈಸೆ ಇಳಿಕೆ ಕಂಡಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ದೇಶ ವಿದೇಶಗಳಲ್ಲಿ ಮುಂದುವರಿದ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ದುಬೈನಲ್ಲಿ ಬಹಳ ಕಡಿಮೆ; ಎಲ್ಲೆಲ್ಲಿ ಎಷ್ಟಿದೆ ದರ? ಇಲ್ಲಿದೆ ವಿವರ
ಪ್ರಾತಿನಿಧಿಕ
ಸುಗ್ಗನಹಳ್ಳಿ ವಿಜಯಸಾರಥಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Apr 29, 2023 | 6:23 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. ಕೆಲ ದಿನಗಳ ಕಾಲ ಭರ್ಜರಿಯಾಗಿ ಓಡಿದ್ದ ಚಿನ್ನದ ಬೆಲೆ ಎರಡು ದಿನಗಳಿಂದ ಶಾಂತಗೊಂಡಿದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ತುಸು ಅಗ್ಗಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,750 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿInvestments: ಷೇರುಹೂಡಿಕೆಯಿಂದಲೇ ಸಿರಿವಂತರಾದ ಜುಂಜುನವಾಲ, ಕೇದಿಯಾ ಮೊದಲಾದವರ ಬಳಿ ಯಾವ್ಯಾವ ಕಂಪನಿಗಳ ಷೇರುಗಳಿವೆ? ಇಲ್ಲಿದೆ ಡೀಟೇಲ್ಸ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 29ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,800 ರೂ
  • ಚೆನ್ನೈ: 56,200 ರೂ
  • ಮುಂಬೈ: 55,750 ರೂ
  • ದೆಹಲಿ: 55,900 ರೂ
  • ಕೋಲ್ಕತಾ: 55,750 ರೂ
  • ಕೇರಳ: 55,750 ರೂ
  • ಅಹ್ಮದಾಬಾದ್: 55,800 ರೂ
  • ಜೈಪುರ್: 55,900 ರೂ
  • ಲಕ್ನೋ: 55,900 ರೂ
  • ಭುವನೇಶ್ವರ್: 55,750 ರೂ

ಇದನ್ನೂ ಓದಿBank Customers Alert: ಬ್ಯಾಂಕ್ ಗ್ರಾಹಕರೇ ಜಾಗ್ರತೆ! ಈ ಬ್ಯಾಂಕ್​ನಲ್ಲಿ ವಾರ್ಷಿಕ ಶುಲ್ಕಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,127 ರುಪಾಯಿ)
  • ದುಬೈ: 2225 ಡಿರಾಮ್ (49,587 ರುಪಾಯಿ)
  • ಅಮೆರಿಕ: 615 ಡಾಲರ್ (50,226 ರುಪಾಯಿ)
  • ಸಿಂಗಾಪುರ: 826 ಸಿಂಗಾಪುರ್ ಡಾಲರ್ (50,568 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (51,358 ರೂ)
  • ಓಮನ್: 242.50 ಒಮಾನಿ ರಿಯಾಲ್ (51,539 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,733 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,000 ರೂ
  • ಮುಂಬೈ: 7,620 ರೂ
  • ದೆಹಲಿ: 7,620 ರೂ
  • ಕೋಲ್ಕತಾ: 7,620 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,620 ರೂ
  • ಜೈಪುರ್: 7,620 ರೂ
  • ಲಕ್ನೋ: 7,620 ರೂ
  • ಭುವನೇಶ್ವರ್: 8,000 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Sat, 29 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ