Gold Silver Price on 2nd April: ಟರ್ಕಿ, ಚೀನಾ ಎಫೆಕ್ಟ್; ಚಿನ್ನದ ಬೆಲೆ ಮತ್ತೆ ಗಗನಕ್ಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 April 2nd: ಟರ್ಕಿ, ಚೀನಾದಲ್ಲಿ ಚಿನ್ನದ ಖರೀದಿ ಭರಾಟೆ ಹೆಚ್ಚಾಗಿರುವುದರಿಂದ ಜಾಗತಿಕವಾಗಿ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 63,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2nd April: ಟರ್ಕಿ, ಚೀನಾ ಎಫೆಕ್ಟ್; ಚಿನ್ನದ ಬೆಲೆ ಮತ್ತೆ ಗಗನಕ್ಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Apr 02, 2024 | 5:00 AM

ಬೆಂಗಳೂರು, ಏಪ್ರಿಲ್ 2: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಳದಿ ಲೋಹ ಇವತ್ತು ಸಿಕ್ಕಾಪಟ್ಟೆ ಬೆಲೆ ಹೆಚ್ಚಳ ಕಂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮಂಗಳವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 85 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ 60 ಪೈಸೆ ಹೆಚ್ಚಾಗಿದೆ. ಅಗ್ರಮಾನ್ಯ ಚಿನ್ನ ಬಳಕೆಯ ದೇಶಗಳಾದ ಚೀನಾ ಮತ್ತು ಟರ್ಕಿಯ ರೀಟೇಲ್ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಲೆ ವಿಪರೀತವಾಗಿ ಹೆಚ್ಚಾಗುತ್ತಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 250 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 63,600 ರೂ
  • ಚೆನ್ನೈ: 64,550 ರೂ
  • ಮುಂಬೈ: 63,600 ರೂ
  • ದೆಹಲಿ: 63,750 ರೂ
  • ಕೋಲ್ಕತಾ: 63,600 ರೂ
  • ಕೇರಳ: 63,600 ರೂ
  • ಅಹ್ಮದಾಬಾದ್: 63,650 ರೂ
  • ಜೈಪುರ್: 63,750 ರೂ
  • ಲಕ್ನೋ: 63,750 ರೂ
  • ಭುವನೇಶ್ವರ್: 63,600 ರೂ

ಇದನ್ನೂ ಓದಿ: ಕೆಲಸ ಬದಲಿಸಿದರೆ ಹಳೆಯ ಪಿಎಫ್ ಖಾತೆ ಬಗ್ಗೆ ಚಿಂತೆ ಬೇಡ; ತನ್ನಂತಾನೇ ಆಗುತ್ತೆ ಹಣ ವರ್ಗಾವಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,370 ರಿಂಗಿಟ್ (59,408 ರುಪಾಯಿ)
  • ದುಬೈ: 2,535 ಡಿರಾಮ್ (57,558 ರುಪಾಯಿ)
  • ಅಮೆರಿಕ: 685 ಡಾಲರ್ (57,116 ರುಪಾಯಿ)
  • ಸಿಂಗಾಪುರ: 946 ಸಿಂಗಾಪುರ್ ಡಾಲರ್ (58,465 ರುಪಾಯಿ)
  • ಕತಾರ್: 2,585 ಕತಾರಿ ರಿಯಾಲ್ (59,114 ರೂ)
  • ಸೌದಿ ಅರೇಬಿಯಾ: 2,600 ಸೌದಿ ರಿಯಾಲ್ (57,799 ರುಪಾಯಿ)
  • ಓಮನ್: 274 ಒಮಾನಿ ರಿಯಾಲ್ (59,344 ರುಪಾಯಿ)
  • ಕುವೇತ್: 214.50 ಕುವೇತಿ ದಿನಾರ್ (58,131 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,750 ರೂ
  • ಚೆನ್ನೈ: 8,160 ರೂ
  • ಮುಂಬೈ: 7,860 ರೂ
  • ದೆಹಲಿ: 7,860 ರೂ
  • ಕೋಲ್ಕತಾ: 7,860 ರೂ
  • ಕೇರಳ: 8,160 ರೂ
  • ಅಹ್ಮದಾಬಾದ್: 7,860 ರೂ
  • ಜೈಪುರ್: 7,860 ರೂ
  • ಲಕ್ನೋ: 7,860 ರೂ
  • ಭುವನೇಶ್ವರ್: 8,160 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!