ಬೆಂಗಳೂರು, ಏಪ್ರಿಲ್ 2: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಳದಿ ಲೋಹ ಇವತ್ತು ಸಿಕ್ಕಾಪಟ್ಟೆ ಬೆಲೆ ಹೆಚ್ಚಳ ಕಂಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮಂಗಳವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 85 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ 60 ಪೈಸೆ ಹೆಚ್ಚಾಗಿದೆ. ಅಗ್ರಮಾನ್ಯ ಚಿನ್ನ ಬಳಕೆಯ ದೇಶಗಳಾದ ಚೀನಾ ಮತ್ತು ಟರ್ಕಿಯ ರೀಟೇಲ್ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಲೆ ವಿಪರೀತವಾಗಿ ಹೆಚ್ಚಾಗುತ್ತಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 250 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,750 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕೆಲಸ ಬದಲಿಸಿದರೆ ಹಳೆಯ ಪಿಎಫ್ ಖಾತೆ ಬಗ್ಗೆ ಚಿಂತೆ ಬೇಡ; ತನ್ನಂತಾನೇ ಆಗುತ್ತೆ ಹಣ ವರ್ಗಾವಣೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ