ಬೆಂಗಳೂರು, ಏಪ್ರಿಲ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಗುರುವಾಗ ಹೈಜಂಪ್ ಮಾಡಿವೆ. ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 75 ರೂನಷ್ಟು ಹೆಚ್ಚಾದರೆ, ಬೆಳ್ಳಿ ಬೆಲೆಯೂ ಗ್ರಾಮ್ಗೆ 2 ರೂನಷ್ಟು ಜಿಗಿತ ಕಂಡಿದೆ. ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ. ಮಿಡಲ್ ಈಸ್ಟ್ ಏಷ್ಯಾ ದೇಶಗಳಲ್ಲಿನ ರಾಜಕೀಯ ಬಿಕ್ಕಟ್ಟು, ಮತ್ತು ಯುದ್ಧ ಸೂಕ್ಷ್ಮ ಸ್ಥಿತಿ ಚಿನ್ನದ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,825 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ವೀಕೆಂಡ್ ರಜೆಗಳಿಲ್ಲ, ದಿನಕ್ಕೆ 15 ಗಂಟೆ ಕೆಲಸ; ವರ್ಕ್ ಫ್ರಂ ಕೇಳಲೇಬೇಡಿ: ಇದು ನವಿ ಕಂಪನಿ ಬಾಸ್ ಕಥೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ