Gold Silver Price on 5th April: ಎಡಬಿಡದೆ ಏರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಈ ದಾಖಲೆ ಓಟಕ್ಕೇನು ಕಾರಣ?

Bullion Market 2024 April 5th: ಜಾಗತಿಕ ವಿದ್ಯಮಾನಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತ ಪರಿಸ್ಥಿತಿಯು ಚಿನ್ನ ಮತ್ತು ಬೆಳ್ಳಿ ಮೇಲಿನ ಹೂಡಿಕೆಗಳನ್ನು ಹೆಚ್ಚಿಸುತ್ತಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 82 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 64,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,975 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5th April: ಎಡಬಿಡದೆ ಏರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಈ ದಾಖಲೆ ಓಟಕ್ಕೇನು ಕಾರಣ?
ಚಿನ್ನ
Follow us
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Apr 05, 2024 | 5:00 AM

ಬೆಂಗಳೂರು, ಏಪ್ರಿಲ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಈ ವಾರ ಯರ್ರಾಬಿರ್ರಿ ಬೆಲೆ ಏರುತ್ತಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 345 ರೂನಷ್ಟು ಹೆಚ್ಚಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟುಗಳು, ರೆಡ್ ಸೀ ಬಿಕ್ಕಟ್ಟು, ಹಣದುಬ್ಬರದ ತಲೆನೋವು, ಅನಿಶ್ಚಿತ ಆರ್ಥಿಕ ಚಟುವಟಿಕೆ ಇತ್ಯಾದಿ ಅಂಶಗಳು ಹೂಡಿಕೆದಾರರನ್ನು ಚಿನ್ನದತ್ತ ಸೆಳೆಯುತ್ತಿವೆ. ಬೆಳ್ಳಿಯ ಮೇಲಿನ ಹೂಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ, ಈ ಎರಡೂ ಲೋಹಗಳ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,975 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 797.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,600 ರೂ
  • ಚೆನ್ನೈ: 65,450 ರೂ
  • ಮುಂಬೈ: 64,600 ರೂ
  • ದೆಹಲಿ: 64,750 ರೂ
  • ಕೋಲ್ಕತಾ: 64,600 ರೂ
  • ಕೇರಳ: 64,600 ರೂ
  • ಅಹ್ಮದಾಬಾದ್: 64,650 ರೂ
  • ಜೈಪುರ್: 64,750 ರೂ
  • ಲಕ್ನೋ: 64,750 ರೂ
  • ಭುವನೇಶ್ವರ್: 64,600 ರೂ

ಇದನ್ನೂ ಓದಿ: 17,545 ಕೋಟಿ ರೂ ಕುಬೇರನ ಆಸ್ತಿ ಒಂದೇ ವರ್ಷದಲ್ಲಿ ಸೊನ್ನೆಗೆ; ಬೈಜು ರವೀಂದ್ರನ್ ಪತನದ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (60,700 ರುಪಾಯಿ)
  • ದುಬೈ: 2,570 ಡಿರಾಮ್ (58,396 ರುಪಾಯಿ)
  • ಅಮೆರಿಕ: 700 ಡಾಲರ್ (58,379 ರುಪಾಯಿ)
  • ಸಿಂಗಾಪುರ: 964 ಸಿಂಗಾಪುರ್ ಡಾಲರ್ (59,648 ರುಪಾಯಿ)
  • ಕತಾರ್: 2,625 ಕತಾರಿ ರಿಯಾಲ್ (60,040 ರೂ)
  • ಸೌದಿ ಅರೇಬಿಯಾ: 2,630 ಸೌದಿ ರಿಯಾಲ್ (58,475 ರುಪಾಯಿ)
  • ಓಮನ್: 277 ಒಮಾನಿ ರಿಯಾಲ್ (60,005 ರುಪಾಯಿ)
  • ಕುವೇತ್: 218 ಕುವೇತಿ ದಿನಾರ್ (59,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,975 ರೂ
  • ಚೆನ್ನೈ: 8,530 ರೂ
  • ಮುಂಬೈ: 8,200 ರೂ
  • ದೆಹಲಿ: 8,200 ರೂ
  • ಕೋಲ್ಕತಾ: 8,200 ರೂ
  • ಕೇರಳ: 8,530 ರೂ
  • ಅಹ್ಮದಾಬಾದ್: 8,200 ರೂ
  • ಜೈಪುರ್: 8,200 ರೂ
  • ಲಕ್ನೋ: 8,200 ರೂ
  • ಭುವನೇಶ್ವರ್: 8,530 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!