Kannada News Business Gold Prices April 5th 2024, Gold, Silver Again see Big Rise, Know the reasons behind this run
Gold Silver Price on 5th April: ಎಡಬಿಡದೆ ಏರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಈ ದಾಖಲೆ ಓಟಕ್ಕೇನು ಕಾರಣ?
Bullion Market 2024 April 5th: ಜಾಗತಿಕ ವಿದ್ಯಮಾನಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತ ಪರಿಸ್ಥಿತಿಯು ಚಿನ್ನ ಮತ್ತು ಬೆಳ್ಳಿ ಮೇಲಿನ ಹೂಡಿಕೆಗಳನ್ನು ಹೆಚ್ಚಿಸುತ್ತಿವೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 82 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 64,600 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,975 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಏಪ್ರಿಲ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಈ ವಾರ ಯರ್ರಾಬಿರ್ರಿ ಬೆಲೆ ಏರುತ್ತಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 345 ರೂನಷ್ಟು ಹೆಚ್ಚಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟುಗಳು, ರೆಡ್ ಸೀ ಬಿಕ್ಕಟ್ಟು, ಹಣದುಬ್ಬರದ ತಲೆನೋವು, ಅನಿಶ್ಚಿತ ಆರ್ಥಿಕ ಚಟುವಟಿಕೆ ಇತ್ಯಾದಿ ಅಂಶಗಳು ಹೂಡಿಕೆದಾರರನ್ನು ಚಿನ್ನದತ್ತ ಸೆಳೆಯುತ್ತಿವೆ. ಬೆಳ್ಳಿಯ ಮೇಲಿನ ಹೂಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ, ಈ ಎರಡೂ ಲೋಹಗಳ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,975 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 797.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)