AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Prices: ಸತತ ಏರಿಕೆ ಬಳಿಕ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಇದು ಖರೀದಿಸುವ ಸಮಯವಾ?

Bullion Market 2023, April 7th: ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,900 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,980 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಕೂಡ ಸ್ವಲ್ಪ ಮಟ್ಟಿಗೆ ತಗ್ಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಸತತ ಏರಿಕೆ ಬಳಿಕ ಇಳಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಇದು ಖರೀದಿಸುವ ಸಮಯವಾ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2023 | 5:03 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಏಪ್ರಿಲ್ 7ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,900 ರುಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 7,649 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚು ನೆಲಸಿರುವ ದುಬೈ, ಅಮೆರಿಕ, ಸಿಂಗಾಪುರ ಮೊದಲಾದ ದೇಶಗಳಲ್ಲಿ 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ ಭಾರತೀಯ ರುಪಾಯಿ ಲೆಕ್ಕದಲ್ಲಿ 53,000 ರೂವರೆಗೂ ಇದೆ.
  • ಆರ್ಥಿಕ ಪರಿಸ್ಥಿತಿ ಇನ್ನೂ ಅಸ್ಪಷ್ಟವಾಗಿರುವುದರಿಂದ ಜನರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಮುಂದಿನ ದಿನಗಳಲ್ಲೂ ಹೀಗೇ ಇಳಿಕೆ ಕಾಣುವ ಸಾಧ್ಯತೆ ಕಡಿಮೆ.

ಬೆಂಗಳೂರು: ಭಾರತದಲ್ಲಿ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇದೀಗ ತುಸು ತಗ್ಗುವ ಮೂಲಕ ಚಿನ್ನದ ಗ್ರಾಹಕರಿಗೆ ತುಸು ನಿರಾಳರಾಗುವಂತೆ ಮಾಡಿದೆ. 10 ಗ್ರಾಮ್ ಚಿನ್ನದ ಬೆಲೆ (Gold Price in India) ಭಾರತದಲ್ಲಿ 300ರಿಂದ 400 ರೂಪಾಯಿಯಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೂಡ 100 ಗ್ರಾಮ್​ಗೆ ಸುಮಾರು 60 ರುಪಾಯಿಯಷ್ಟು ಕಡಿಮೆ ಆಗಿದೆ. ಕಳೆದ 2-3 ವಾರಗಳಿಂದ ನಾಲ್ಕೈದು ಸಾವಿರ ರೂನಷ್ಟು ಏರಿಕೆ ಕಾಣುವ ಮೂಲಕ ಚಿನ್ನದ ಬೆಲೆ ಜೀವಮಾನ ಗರಿಷ್ಠ ಮಟ್ಟದಲ್ಲಿತ್ತು. ಇದೀಗ ಸ್ವಲ್ಪ ಮಟ್ಟಿಗೆ ಏರಿಕೆಗೆ ವಿರಾಮ ಸಿಕ್ಕಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,900 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,649 ರುಪಾಯಿಗೆ ಇಳಿದಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 8,000 ರುಪಾಯಿಗೆ ಇಳಿದಿದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ. ಆಗೊಂದು, ಈಗೊಂದು ದಿನದಲ್ಲಿ ಚಿನ್ನದ ಬೆಲೆ ವಿವಿಧ ಕಾರಣಗಳಿಗೆ ಇಳಿಕೆ ಕಂಡರೂ ಸಾಮಾನ್ಯವಾಗಿ ಅದಕ್ಕಿರುವ ಬೇಡಿಕೆ ತಗ್ಗುವುದಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿ (Bullion Market) ಚಿನ್ನದ ಬೆಲೆ ಇಳಿಕೆ. ಭಾರತದಲ್ಲಿಯಷ್ಟು ಚಿನ್ನದ ಬೆಲೆ ಏರಿಕೆ ವಿದೇಶಗಳಲ್ಲಿ ಆಗುತ್ತಿಲ್ಲ. ಏಪ್ರಿಲ್ 7ರಂದು ಅಂತಾರಾಷ್ಟ್ರೀಯ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಚಿನ್ನ ದಾಖಲೆ ಮಟ್ಟದ ಬೆಲೆಯಲ್ಲಿ ವಹಿವಾಟು ಕಾಣುತ್ತಿಎ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಕನಿಷ್ಠ 50 ಸಾವಿರ ರೂ ಇದೆ. ಮಲೇಷ್ಯಾ, ಕತಾರ್ ಮತ್ತು ಓಮನ್​ನಲ್ಲಿ ಚಿನ್ನದ ಬೆಲೆ 52 ಸಾವಿರ ರೂಗಿಂತ ಹೆಚ್ಚಿದೆ.

ಬೆಲೆ ಏರಿಕೆಗೆ ಏನು ಕಾರಣ?

ಅಮೆರಿಕದ ಆರ್ಥಿಕತೆಯ ತುಮುಲ, ನಿರುದ್ಯೋಗ ಅಂಕಿ ಅಂಶದ ಗೊಂದಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಚಿನ್ನದತ್ತ ಗಮನ ಕೊಡುವಂತೆ ಮಾಡಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚಿ ಬೆಲೆ ಕೂಡ ಹೆಚ್ಚುತ್ತಿದೆ. ತಜ್ಞರ ಪ್ರಕಾರ ಇನ್ನೂ ಬಹಳಷ್ಟು ದಿನ ಚಿನ್ನದ ಬೆಲೆ ಏರಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಈಗಲೂ ಪ್ರಶಸ್ತ ಸಮಯ ಇದೆ ಎಂಬ ಸಲಹೆಯನ್ನು ಕೊಡಲಾಗಿದೆ.

ಇದನ್ನೂ ಓದಿ: Unclaimed Deposits: ನಿಷ್ಕ್ರಿಯ ಖಾತೆಗಳ ಪಟ್ಟಿ ಆರ್​ಬಿಐಗೆ ಕೊಟ್ಟ ಬ್ಯಾಂಕುಗಳು; ಈ ಖಾತೆಗಳಲ್ಲಿ ಎಷ್ಟಿದೆ ಹಣ, ಮುಂದೇನಾಗುತ್ತೆ? ಇಲ್ಲಿದೆ ವಿವರ

ಭಾರತದಲ್ಲಿರುವ ಬೆಲೆ (ಏಪ್ರಿಲ್ 7ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,900 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,980 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 764.90 ರೂ

ಬೆಂಗಳೂರಿನಲ್ಲಿರುವ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,030 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,950 ರೂ
  • ಚೆನ್ನೈ: 56,500 ರೂ
  • ಮುಂಬೈ: 55,900 ರೂ
  • ದೆಹಲಿ: 56,050 ರೂ
  • ಕೋಲ್ಕತಾ: 55,900 ರೂ
  • ಕೇರಳ: 55,900 ರೂ
  • ಅಹ್ಮದಾಬಾದ್: 55,950 ರೂ
  • ಜೈಪುರ್: 56,050 ರೂ
  • ಲಕ್ನೋ: 56,050 ರೂ
  • ಭುವನೇಶ್ವರ್: 55,900 ರೂ

ಇದನ್ನೂ ಓದಿ: Unclaimed Deposits: ನಿಷ್ಕ್ರಿಯ ಖಾತೆಗಳ ಪಟ್ಟಿ ಆರ್​ಬಿಐಗೆ ಕೊಟ್ಟ ಬ್ಯಾಂಕುಗಳು; ಈ ಖಾತೆಗಳಲ್ಲಿ ಎಷ್ಟಿದೆ ಹಣ, ಮುಂದೇನಾಗುತ್ತೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (52,688 ರುಪಾಯಿ)
  • ದುಬೈ: 2262.50 ಡಿರಾಮ್ (50,454 ರುಪಾಯಿ)
  • ಅಮೆರಿಕ: 620 ಡಾಲರ್ (50,796 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,154 ರುಪಾಯಿ)
  • ಕತಾರ್: 2,320 ಕತಾರಿ ರಿಯಾಲ್ (52,185 ರೂ)
  • ಓಮನ್: 246 ಒಮಾನಿ ರಿಯಾಲ್ (52,333 ರುಪಾಯಿ)
  • ಕುವೇತ್: 192.50 ಕುವೇತಿ ದಿನಾರ್ (51,382 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,000 ರೂ
  • ಚೆನ್ನೈ: 8,000 ರೂ
  • ಮುಂಬೈ: 7,649 ರೂ
  • ದೆಹಲಿ: 7,649 ರೂ
  • ಕೋಲ್ಕತಾ: 7,649 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,649 ರೂ
  • ಜೈಪುರ್: 7,649 ರೂ
  • ಲಕ್ನೋ: 7,649 ರೂ
  • ಭುವನೇಶ್ವರ್: 8,000 ರೂ

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್