AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 7th April: ವಾರಾಂತ್ಯದಲ್ಲಿ ಶಾಂತಗೊಂಡ ಚಿನ್ನ, ಬೆಳ್ಳಿ ಬೆಲೆಗಳ ಓಟ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 April 7th: ಈ ವಾರ ಬಹುತೇಕ ಭರ್ಜರಿ ಹೆಚ್ಚಳವಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಮಂದವಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 81.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 64,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,150 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 7th April: ವಾರಾಂತ್ಯದಲ್ಲಿ ಶಾಂತಗೊಂಡ ಚಿನ್ನ, ಬೆಳ್ಳಿ ಬೆಲೆಗಳ ಓಟ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2024 | 5:00 AM

Share

ಬೆಂಗಳೂರು, ಏಪ್ರಿಲ್ 7: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಭರ್ಜರಿಯಾಗಿ ಹೆಚ್ಚಿವೆ. ವಾರಾಂತ್ಯದಲ್ಲಿ ತುಸು ಬೆಲೆ ತಗ್ಗಿದೆ. ಒಟ್ಟಾರೆ ಈ ಎರಡು ಅಮೂಲ್ಯ ಲೋಹಗಳಿಗೆ ಈ ವಾರ ಭಾರೀ ಬೇಡಿಕೆ ಉಂಟಾಗಿತ್ತು. ಈ ಪರಿ ಬೆಲೆ ಹೆಚ್ಚಳಕ್ಕೆ ನಿರ್ದಿಷ್ಟ ಕಾರಣವಿಲ್ಲ. ಬೇರೆ ಬೇರೆ ಮಿಶ್ರ ಕಾರಣಗಳಿಗೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 817 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 815 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,150 ರೂ
  • ಚೆನ್ನೈ: 65,100 ರೂ
  • ಮುಂಬೈ: 64,150 ರೂ
  • ದೆಹಲಿ: 64,300 ರೂ
  • ಕೋಲ್ಕತಾ: 64,150 ರೂ
  • ಕೇರಳ: 64,150 ರೂ
  • ಅಹ್ಮದಾಬಾದ್: 64,200 ರೂ
  • ಜೈಪುರ್: 64,300 ರೂ
  • ಲಕ್ನೋ: 64,300 ರೂ
  • ಭುವನೇಶ್ವರ್: 64,150 ರೂ

ಇದನ್ನೂ ಓದಿ: ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಬಾರಿಗೆ ಮೈಸೂರಿನ ಉದ್ಯಮಿ ರಮೇಶ್​ಗೆ ಸ್ಥಾನ; ಚಂದ್ರಯಾನಕ್ಕೆ ಕೊಡುಗೆ ಕೊಟ್ಟಿದ್ದರ ಫಲಶ್ರುತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,420 ರಿಂಗಿಟ್ (60,055 ರುಪಾಯಿ)
  • ದುಬೈ: 2,567.50 ಡಿರಾಮ್ (58,271 ರುಪಾಯಿ)
  • ಅಮೆರಿಕ: 700 ಡಾಲರ್ (58,340 ರುಪಾಯಿ)
  • ಸಿಂಗಾಪುರ: 954 ಸಿಂಗಾಪುರ್ ಡಾಲರ್ (58,909 ರುಪಾಯಿ)
  • ಕತಾರ್: 2,610 ಕತಾರಿ ರಿಯಾಲ್ (59,658 ರೂ)
  • ಸೌದಿ ಅರೇಬಿಯಾ: 2,630 ಸೌದಿ ರಿಯಾಲ್ (58,436 ರುಪಾಯಿ)
  • ಓಮನ್: 276 ಒಮಾನಿ ರಿಯಾಲ್ (59,760 ರುಪಾಯಿ)
  • ಕುವೇತ್: 217 ಕುವೇತಿ ದಿನಾರ್ (58,813 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,150 ರೂ
  • ಚೆನ್ನೈ: 8,500 ರೂ
  • ಮುಂಬೈ: 8,170 ರೂ
  • ದೆಹಲಿ: 8,170 ರೂ
  • ಕೋಲ್ಕತಾ: 8,170 ರೂ
  • ಕೇರಳ: 8,500 ರೂ
  • ಅಹ್ಮದಾಬಾದ್: 8,170 ರೂ
  • ಜೈಪುರ್: 8,170 ರೂ
  • ಲಕ್ನೋ: 8,170 ರೂ
  • ಭುವನೇಶ್ವರ್: 8,500 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?