ಬೆಂಗಳೂರು, ಏಪ್ರಿಲ್ 7: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಭರ್ಜರಿಯಾಗಿ ಹೆಚ್ಚಿವೆ. ವಾರಾಂತ್ಯದಲ್ಲಿ ತುಸು ಬೆಲೆ ತಗ್ಗಿದೆ. ಒಟ್ಟಾರೆ ಈ ಎರಡು ಅಮೂಲ್ಯ ಲೋಹಗಳಿಗೆ ಈ ವಾರ ಭಾರೀ ಬೇಡಿಕೆ ಉಂಟಾಗಿತ್ತು. ಈ ಪರಿ ಬೆಲೆ ಹೆಚ್ಚಳಕ್ಕೆ ನಿರ್ದಿಷ್ಟ ಕಾರಣವಿಲ್ಲ. ಬೇರೆ ಬೇರೆ ಮಿಶ್ರ ಕಾರಣಗಳಿಗೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,150 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಬಾರಿಗೆ ಮೈಸೂರಿನ ಉದ್ಯಮಿ ರಮೇಶ್ಗೆ ಸ್ಥಾನ; ಚಂದ್ರಯಾನಕ್ಕೆ ಕೊಡುಗೆ ಕೊಟ್ಟಿದ್ದರ ಫಲಶ್ರುತಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ