ಬೆಂಗಳೂರು, ಏಪ್ರಿಲ್ 8: ಕಳೆದ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಭರ್ಜರಿಯಾಗಿ ಏರಿವೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಒಂದು ಗ್ರಾಮ್ಗೆ 460 ರೂನಷ್ಟು ಹೆಚ್ಚಾಗಿದೆ. ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಹೊಯ್ದಾಟ ಮುಂದುವರಿಯುತ್ತಾ ಹೋಗುವ ನಿರೀಕ್ಷೆ ಇದೆ. ಇವತ್ತು ಚಿನ್ನದ ಬೆಲೆ ಗ್ರಾಮ್ಗೆ 6,500ಕ್ಕೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆಗೆ 7,100 ದಾಟಿದೆ. ಕಳೆದ 10 ದಿನಗಳಿಂದ ಅನಿರೀಕ್ಷಿತ ರೀತಿಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಒಂದು ವರ್ಷದಲ್ಲಿ ಆಗಬೇಕಿದ್ದ ಹೆಚ್ಚಳ ಕೆಲವೇ ತಿಂಗಳಲ್ಲಿ ಆಗಿದೆ. ಜಾಗತಿಕ ಯುದ್ಧ ಬೀತಿ ಹಿನ್ನೆಲೆಯಲ್ಲಿ ಚಿನ್ನಕ್ಕೆ ಈ ಪರಿ ಬೇಡಿಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ನಿಮ್ಮ ಹೂಡಿಕೆ ಹೇಗಿರಬೇಕು, ಎಲ್ಲೆಲ್ಲಿ ಎಷ್ಟೆಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ