AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10 August: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ

Bullion Market 2023, August 10th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.5 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10 August: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 10, 2023 | 4:59 AM

Share

ಬೆಂಗಳೂರು, ಆಗಸ್ಟ್ 10: ಡಾಲರ್ ಗಟ್ಟಿಗೊಳ್ಳುತ್ತಿರುವಂತೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold Rates) ಇಳಿಕೆ ಮುಂದುವರಿಯುತ್ತಿದೆ. ಯುಎಇಯಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗಿದೆ. ಅಮೆರಿಕದಲ್ಲೂ ಸ್ವರ್ಣ ಬೆಲೆ ಕುಸಿತ ಆರಂಭವಾಗಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಈ ಇಳಿಕೆ ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. ಆದರೆ ತಾತ್ಕಾಲಿಕ ಎಂದರೆ ಎಷ್ಟು ಅವಧಿಯವರೆಗೆ ಈ ಇಳಿಕೆ ಇರುತ್ತದೆ ಎಂಬುದು ಗೊತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,300 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ

ಇದನ್ನೂ ಓದಿ: ಪುಟ್ಟ ಮನೆ, ಕಾರು ಬಿಟ್ಟು ಸಾವಿರಾರು ಕೋಟಿ ಮೌಲ್ಯದ ಆಸ್ತಿ ದಾನ; ಕೈಯಲ್ಲಿ ಮೊಬೈಲ್ ಫೋನ್ ಕೂಡ ಇಲ್ಲ; ಇದು ಶ್ರೀರಾಮ್ ಗ್ರೂಪ್ ಸ್ಥಾಪಕರ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,210 ರುಪಾಯಿ)
  • ದುಬೈ: 2162.50 ಡಿರಾಮ್ (48,785 ರುಪಾಯಿ)
  • ಅಮೆರಿಕ: 590 ಡಾಲರ್ (48,856 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,724 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,751 ರೂ)
  • ಓಮನ್: 236 ಒಮಾನಿ ರಿಯಾಲ್ (50,795 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,096 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,670 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7350 ರೂ
  • ಕೇರಳ: 7,670 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,670 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು