ಬೆಂಗಳೂರು, ಆಗಸ್ಟ್ 11: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold Rates) ಇಳಿಕೆ ಮುಂದುವರಿಯುತ್ತಿದೆ. ಅಮೆರಿಕನ್ ಡಾಲರ್ ಪ್ರಬಲಗೊಳ್ಳುತ್ತಿರುವುದು ಹಾಗೂ ಅಲ್ಲಿ ಬಡ್ಡಿದರ ಏರಿಕೆಯಾಗುವ ನಿರೀಕ್ಷೆ ಇರುವುದು ಚಿನ್ನದ ಮೇಲಿನ ಹೂಡಿಕೆ ಕಡಿಮೆಗೊಳ್ಳುತ್ತಿದೆ. ಇದರ ಪರಿಣಾಮವಾಗಿ ಸ್ವರ್ಣ ಲೋಹದ ಬೆಲೆ ಎಲ್ಲೆಡೆ ಇಳಿಯುತ್ತಿದೆ. ಇವತ್ತೂ ಕೂಡ ಚಿನ್ನದ ಬೆಲೆ ಮತ್ತಷ್ಟು ಇಳಿಯುವ ಸೂಚನೆ ಇದೆ. ಮಾರುಕಟ್ಟೆ ತಜ್ಞರ ಪ್ರಕಾರ, ಈ ಇಳಿಕೆ ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. ಆದರೆ ತಾತ್ಕಾಲಿಕ ಎಂದರೆ ಎಷ್ಟು ಅವಧಿಯವರೆಗೆ ಈ ಇಳಿಕೆ ಇರುತ್ತದೆ ಎಂಬುದು ಗೊತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,225 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 10 August: ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಇಂದು ಕೋಕೋ, ಅಡಿಕೆ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ