Gold Silver Price on 14 August: ಭಾರತದಲ್ಲಿ ಬೆಳ್ಳಿ ಬೆಲೆ ಭರ್ಜರಿ ಏರಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಗಳ ಪಟ್ಟಿ

|

Updated on: Aug 14, 2023 | 5:00 AM

Bullion Market 2023, August 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.20 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 August: ಭಾರತದಲ್ಲಿ ಬೆಳ್ಳಿ ಬೆಲೆ ಭರ್ಜರಿ ಏರಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಗಳ ಪಟ್ಟಿ
ಚಿನ್ನ
Follow us on

ಬೆಂಗಳೂರು, ಆಗಸ್ಟ್ 14: ಭಾರತದಲ್ಲಿ ಬೆಳ್ಳಿ ಬೆಲೆ ಭರ್ಜರಿಯಾಗಿ ಏರಿಕೆಯಾಗಿದೆ. ಗ್ರಾಮ್​ಗೆ 3.20 ರೂನಷ್ಟು ಬೆಲೆ ಹೆಚ್ಚಳ ಕಂಡಿದೆ ಬೆಳ್ಳಿ. ಇನ್ನು ಚಿನ್ನದ ಬೆಲೆಯೂ ಇಂದು (Gold Rates) ಏರಿಕೆ ಕಾಣುವ ನಿರೀಕ್ಷೆ ಇದೆ. ಕಳೆದ ವಾರಾಂತ್ಯದಲ್ಲಿ ಚಿನ್ನದ ಬೆಲೆ ಇಳಿದರೂ ಡಾಲರ್ ಎದುರು ರುಪಾಯಿ ಮೌಲ್ಯ ಕಡಿಮೆ ಆಗಿರುವುದರ ಪರವಾಗಿ ಚಿನ್ನ ಭಾರತೀಯರಿಗೆ ತುಸು ದುಬಾರಿ ಆಗಿದೆ. ಕಳೆದ ವಾರ ಅಮೆರಿಕದಲ್ಲಿ ಬಡ್ಡಿದರ ಏರಿಕೆ ಪರಿಣಾಮ ಚಿನ್ನದಿಂದ ಹಿಂದಕ್ಕೆ ಸರಿದಿದ್ದ ಹೂಡಿಕೆದಾರರ ವರ್ತನೆ ಈ ವಾರ ಯಾವ ರೀತಿಯಲ್ಲಿ ಇರಲಿದೆ ಎಂಬುದು ಕುತೂಹಲದ ಸಂಗತಿ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,650 ರೂ
  • ಚೆನ್ನೈ: 55,000 ರೂ
  • ಮುಂಬೈ: 54,650 ರೂ
  • ದೆಹಲಿ: 54,800 ರೂ
  • ಕೋಲ್ಕತಾ: 54,650 ರೂ
  • ಕೇರಳ: 54,650 ರೂ
  • ಅಹ್ಮದಾಬಾದ್: 54,700 ರೂ
  • ಜೈಪುರ್: 54,800 ರೂ
  • ಲಕ್ನೋ: 54,800 ರೂ
  • ಭುವನೇಶ್ವರ್: 54,650 ರೂ

ಇದನ್ನೂ ಓದಿ: ಷೇರುಪೇಟೆಯಲ್ಲಿ ನೇರವಾಗಿ ಹೂಡಿಕೆ ಮಾಡಲು ಭಯವಾ? ನಿಮಗಾಗಿ ಇಗೋ ಇದೆ ಈಕ್ವಿಟ್ ಸೇವಿಂಗ್ಸ್ ಫಂಡ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,810 ರಿಂಗಿಟ್ (50,808 ರುಪಾಯಿ)
  • ದುಬೈ: 2145 ಡಿರಾಮ್ (48,445 ರುಪಾಯಿ)
  • ಅಮೆರಿಕ: 590 ಡಾಲರ್ (48,775 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,389 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,336 ರೂ)
  • ಓಮನ್: 234 ಒಮಾನಿ ರಿಯಾಲ್ (50,353 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,772 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,620 ರೂ
  • ಮುಂಬೈ: 7,620 ರೂ
  • ದೆಹಲಿ: 7,620 ರೂ
  • ಕೋಲ್ಕತಾ: 7,620 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,620 ರೂ
  • ಜೈಪುರ್: 7,620 ರೂ
  • ಲಕ್ನೋ: 7,620 ರೂ
  • ಭುವನೇಶ್ವರ್: 7,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ