AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15 August: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಗಳ ಪಟ್ಟಿ

Bullion Market 2023, August 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15 August: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಗಳ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 15, 2023 | 5:00 AM

Share

ಬೆಂಗಳೂರು, ಆಗಸ್ಟ್ 15: ಭರ್ಜರಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ದಿಢೀರ್ ಕುಸಿತ ಕಂಡಿದೆ. ಗ್ರಾಮ್​ಗೆ 3.40 ರೂನಷ್ಟು ಬೆಲೆ ಇಳಿಕೆ ಕಂಡಿದೆ ಬೆಳ್ಳಿ. ಚಿನ್ನದ ಬೆಲೆ (Gold Rates) ಯಥಾಸ್ಥಿತಿ ಕಾಯ್ದುಕೊಂಡಿದೆ. ಕಳೆದ ವಾರಾಂತ್ಯದಲ್ಲಿ ಚಿನ್ನದ ಬೆಲೆ ಇಳಿದರೂ ಡಾಲರ್ ಎದುರು ರುಪಾಯಿ ಮೌಲ್ಯ ಕಡಿಮೆ ಆಗಿರುವುದರ ಪರವಾಗಿ ಚಿನ್ನ ಭಾರತೀಯರಿಗೆ ತುಸು ದುಬಾರಿ ಆಗಿದೆ. ಕಳೆದ ವಾರ ಅಮೆರಿಕದಲ್ಲಿ ಬಡ್ಡಿದರ ಏರಿಕೆ ಪರಿಣಾಮ ಚಿನ್ನದಿಂದ ಹಿಂದಕ್ಕೆ ಸರಿದಿದ್ದ ಹೂಡಿಕೆದಾರರ ವರ್ತನೆ ಈ ವಾರ ಯಾವ ರೀತಿಯಲ್ಲಿ ಇರಲಿದೆ ಎಂಬುದು ಕುತೂಹಲದ ಸಂಗತಿ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,280 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 15ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 728 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,650 ರೂ
  • ಚೆನ್ನೈ: 55,000 ರೂ
  • ಮುಂಬೈ: 54,650 ರೂ
  • ದೆಹಲಿ: 54,800 ರೂ
  • ಕೋಲ್ಕತಾ: 54,650 ರೂ
  • ಕೇರಳ: 54,650 ರೂ
  • ಅಹ್ಮದಾಬಾದ್: 54,700 ರೂ
  • ಜೈಪುರ್: 54,800 ರೂ
  • ಲಕ್ನೋ: 54,800 ರೂ
  • ಭುವನೇಶ್ವರ್: 54,650 ರೂ

ಇದನ್ನೂ ಓದಿ: Arecanut Price 14 August: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,810 ರಿಂಗಿಟ್ (50,808 ರುಪಾಯಿ)
  • ದುಬೈ: 2145 ಡಿರಾಮ್ (48,445 ರುಪಾಯಿ)
  • ಅಮೆರಿಕ: 590 ಡಾಲರ್ (48,775 ರುಪಾಯಿ)
  • ಸಿಂಗಾಪುರ: 806 ಸಿಂಗಾಪುರ್ ಡಾಲರ್ (49,389 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,336 ರೂ)
  • ಓಮನ್: 233.50 ಒಮಾನಿ ರಿಯಾಲ್ (50,353 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,772 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,150 ರೂ
  • ಚೆನ್ನೈ: 7,600 ರೂ
  • ಮುಂಬೈ: 7,280 ರೂ
  • ದೆಹಲಿ: 7,280 ರೂ
  • ಕೋಲ್ಕತಾ: 7,280 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,280 ರೂ
  • ಜೈಪುರ್: 7,280 ರೂ
  • ಲಕ್ನೋ: 7,280 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ