AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17 August: ಚಿನ್ನದ ಬೆಲೆ ಇಳಿಕೆ ಮುಂದುವರಿಕೆ; ಬೆಳ್ಳಿ ಬೆಲೆ ತುಸು ಹೆಚ್ಚಳ; ಇಲ್ಲಿದೆ ಚಿನ್ನ, ಬೆಳ್ಳಿ ಇವತ್ತಿನ ದರಗಳು

Bullion Market 2023, August 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 August: ಚಿನ್ನದ ಬೆಲೆ ಇಳಿಕೆ ಮುಂದುವರಿಕೆ; ಬೆಳ್ಳಿ ಬೆಲೆ ತುಸು ಹೆಚ್ಚಳ; ಇಲ್ಲಿದೆ ಚಿನ್ನ, ಬೆಳ್ಳಿ ಇವತ್ತಿನ ದರಗಳು
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 17, 2023 | 5:03 AM

Share

ಬೆಂಗಳೂರು, ಆಗಸ್ಟ್ 17: ಚಿನ್ನದ ಇಳಿಕೆಯ ಓಟ (Gold Rates) ಮುಂದುವರಿದಿದೆ. ಅಮೆರಿಕನ್ ಮಾರುಕಟ್ಟೆಯ ಪರಿಣಾಮ ಬಹುತೇಕ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನಕ್ಕಿರುವ ಬೇಡಿಕೆ ತುಸು ಕಡಿಮೆ ಆಗಿದೆ. ಬಹಳ ಮಂದಿ ಹೂಡಿಕೆದಾರರು ಚಿನ್ನ ಬಿಟ್ಟು ಡಾಲರ್ ಬೆನ್ನುಬೀಳುತ್ತಿದ್ದಾರೆ. ಇದು ತಾತ್ಕಾಲಿಕ ಮಾತ್ರವಾಗಿದ್ದು ಹಳದಿ ಲೋಹಕ್ಕಿರುವ ಡಿಮ್ಯಾಂಡ್ ಮರಳುವ ಸಾಧ್ಯತೆ ಇದೆ. ಚಿನ್ನದ ಮೇಲೆ ಹೂಡಿಕೆ ಮಾಡಬೇಕೆನ್ನುವವರು, ಅಥವಾ ಒಡವೆ ಖರೀದಿಸಬೇಕೆನ್ನುವವರಿಗೆ ಇದು ಸಕಾಲ ಎನ್ನಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆ ಏರುತ್ತಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,450 ರೂ
  • ಚೆನ್ನೈ: 54,950 ರೂ
  • ಮುಂಬೈ: 54,450 ರೂ
  • ದೆಹಲಿ: 54,600 ರೂ
  • ಕೋಲ್ಕತಾ: 54,450 ರೂ
  • ಕೇರಳ: 54,450 ರೂ
  • ಅಹ್ಮದಾಬಾದ್: 54,500 ರೂ
  • ಜೈಪುರ್: 54,600 ರೂ
  • ಲಕ್ನೋ: 54,600 ರೂ
  • ಭುವನೇಶ್ವರ್: 54,450 ರೂ

ಇದನ್ನೂ ಓದಿ: Arecanut Price 16 August: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,820 ರಿಂಗಿಟ್ (50,683 ರುಪಾಯಿ)
  • ದುಬೈ: 2137.50 ಡಿರಾಮ್ (48,418 ರುಪಾಯಿ)
  • ಅಮೆರಿಕ: 590 ಡಾಲರ್ (49,092 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,306 ರುಪಾಯಿ)
  • ಕತಾರ್: 2,210 ಕತಾರಿ ರಿಯಾಲ್ (50,448 ರೂ)
  • ಓಮನ್: 233 ಒಮಾನಿ ರಿಯಾಲ್ (50,352 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,746 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,620 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ