Gold Silver Price on 19 August: ಚಿನ್ನ ಸ್ಥಿರ, ಬೆಳ್ಳಿ ಬೆಲೆ ತುಸು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2023, August 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 August: ಚಿನ್ನ ಸ್ಥಿರ, ಬೆಳ್ಳಿ ಬೆಲೆ ತುಸು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ
ಚಿನ್ನ

Updated on: Aug 19, 2023 | 5:00 AM

ಬೆಂಗಳೂರು, ಆಗಸ್ಟ್ 19: ಇವತ್ತು ಚಿನ್ನದ ಬೆಲೆ (Gold Rates) ಯಥಾಸ್ಥಿತಿ ಕಾಯ್ದುಕೊಂಡರೆ ಬೆಳ್ಳಿ ಬೆಲೆ ತುಸು ಹೆಚ್ಚಳವಾಗಿದೆ. ಕತಾರ್ ಮೊದಲಾದ ಕೆಲವೆಡೆ ಚಿನ್ನದ ಬೆಲೆಯಲ್ಲಿ ತುಸು ವ್ಯತ್ಯಯವಾಗಿರುವುದು ಬಿಟ್ಟರೆ ಈ ಹಳದಿ ಲೋಹ ಬಹುತೇಕ ಬೆಲೆ ಬದಲಾವಣೆ ಕಂಡಿಲ್ಲ. ಸತತ ಏರಿಕೆ ಬಳಿಕ ಇಳಿಮುಖದ ಹಾದಿಗೆ ಇಳಿದಿದ್ದ ಬೆಳ್ಳಿ ಬೆಲೆ ಮತ್ತೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,100 ರೂ
  • ಚೆನ್ನೈ: 54,560 ರೂ
  • ಮುಂಬೈ: 54,100 ರೂ
  • ದೆಹಲಿ: 54,250 ರೂ
  • ಕೋಲ್ಕತಾ: 54,100 ರೂ
  • ಕೇರಳ: 54,100 ರೂ
  • ಅಹ್ಮದಾಬಾದ್: 54,150 ರೂ
  • ಜೈಪುರ್: 54,250 ರೂ
  • ಲಕ್ನೋ: 54,250 ರೂ
  • ಭುವನೇಶ್ವರ್: 54,100 ರೂ

ಇದನ್ನೂ ಓದಿ: Arecanut Price 18 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,820 ರಿಂಗಿಟ್ (50,427 ರುಪಾಯಿ)
  • ದುಬೈ: 2122.50 ಡಿರಾಮ್ (48,013 ರುಪಾಯಿ)
  • ಅಮೆರಿಕ: 590 ಡಾಲರ್ (49,032 ರುಪಾಯಿ)
  • ಸಿಂಗಾಪುರ: 799 ಸಿಂಗಾಪುರ್ ಡಾಲರ್ (48,873 ರುಪಾಯಿ)
  • ಕತಾರ್: 2,190 ಕತಾರಿ ರಿಯಾಲ್ (49,937 ರೂ)
  • ಓಮನ್: 231.50 ಒಮಾನಿ ರಿಯಾಲ್ (49,967 ರುಪಾಯಿ)
  • ಕುವೇತ್: 182.50 ಕುವೇತಿ ದಿನಾರ್ (49,232 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,670 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,670 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,670 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us