
ಬೆಂಗಳೂರು, ಆಗಸ್ಟ್ 21: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಆಗಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ಭಾರತದಲ್ಲೂ ಇಂದು ಹೆಚ್ಚುತ್ತಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 3 ರೂ ಹೆಚ್ಚಳವಾಗಿದೆ. ಆಭರಣ ಚಿನ್ನದ ಬೆಲೆ 7,265 ರೂ ಇದೆ. ನಿನ್ನೆ ಅಲ್ಪ ಇಳಿಕೆ ಆದರೂ ಇದು ಇಂದು ಏರುವ ಸಾಧ್ಯತೆ ಇದೆ. ಬೆಳ್ಳಿ ಬೆಲೆ 87 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಸರಿಯಾಗಿ ಬಳಸಿದ್ರೆ ಹಣದ ಚೀಲ; ತಪ್ಪು ಮಾಡಿದರೆ ಸಾಲದ ಶೂಲ; ಕಾರ್ಡ್ ಬಳಸಿ ಲಾಭ ಮಾಡುವುದು ಹೇಗೆ ನೋಡಿ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ