Gold Silver Price on 22 August: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಬೆಲೆ

Bullion Market 2023, August 22nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,070 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.30 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22 August: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಬೆಲೆ
ಚಿನ್ನ, ಬೆಳ್ಳಿ ಬೆಲೆ
Edited By: Rakesh Nayak Manchi

Updated on: Aug 22, 2023 | 6:18 AM

ಬೆಂಗಳೂರು, ಆಗಸ್ಟ್ 22: ಕಳೆದ ವಾರ ಬಹುತೇಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಈ ವಾರ ಏರಿಕೆಯ ಹಾದಿಗೆ ಬಂದಿದೆ. ಭಾರತದಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಅಲ್ಪ ಏರಿಕೆ ಆಗಿದೆ. ವಿದೇಶಗಳಲ್ಲಿ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,330 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 22ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 733 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,150 ರೂ
  • ಚೆನ್ನೈ: 54,550 ರೂ
  • ಮುಂಬೈ: 54,150 ರೂ
  • ದೆಹಲಿ: 54,300 ರೂ
  • ಕೋಲ್ಕತಾ: 54,150 ರೂ
  • ಕೇರಳ: 54,150 ರೂ
  • ಅಹ್ಮದಾಬಾದ್: 54,200 ರೂ
  • ಜೈಪುರ್: 54,300 ರೂ
  • ಲಕ್ನೋ: 54,300 ರೂ
  • ಭುವನೇಶ್ವರ್: 54,150 ರೂ

ಇದನ್ನೂ ಓದಿ: Arecanut Price 21 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,810 ರಿಂಗಿಟ್ (50,264 ರುಪಾಯಿ)
  • ದುಬೈ: 2120 ಡಿರಾಮ್ (47,993 ರುಪಾಯಿ)
  • ಅಮೆರಿಕ: 590 ಡಾಲರ್ (49,058 ರುಪಾಯಿ)
  • ಸಿಂಗಾಪುರ: 798 ಸಿಂಗಾಪುರ್ ಡಾಲರ್ (48,921 ರುಪಾಯಿ)
  • ಕತಾರ್: 2,190 ಕತಾರಿ ರಿಯಾಲ್ (49,958 ರೂ)
  • ಓಮನ್: 232 ಒಮಾನಿ ರಿಯಾಲ್ (50,171 ರುಪಾಯಿ)
  • ಕುವೇತ್: 182.50 ಕುವೇತಿ ದಿನಾರ್ (49,244 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,650 ರೂ
  • ಮುಂಬೈ: 7,330 ರೂ
  • ದೆಹಲಿ: 7,330 ರೂ
  • ಕೋಲ್ಕತಾ: 7,330 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,330 ರೂ
  • ಜೈಪುರ್: 7,330 ರೂ
  • ಲಕ್ನೋ: 7,330 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Tue, 22 August 23

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us