AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23 August: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ

Bullion Market 2023, August 23rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,130 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23 August: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 23, 2023 | 5:00 AM

Share

ಬೆಂಗಳೂರು, ಆಗಸ್ಟ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಏರುಮುಖದಲ್ಲಿ ಮುಂದುವರಿಯುತ್ತವೆ. ಭಾರತದಲ್ಲಿ ಚಿನ್ನದ ಬೆಲೆ ಎಲ್ಲೆಡೆ ಏರಿದೆ. ವಿದೇಶಗಳ ಪ್ರಮುಖ ಮಾರುಕಟ್ಟೆಗಳಲ್ಲೂ ಚಿನ್ನ ತುಟ್ಟಿಯಾಗಿದೆ. ಬೆಳ್ಳಿ ಬೆಲೆಗಳೂ ಎಲ್ಲೆಡೆ ಹೆಚ್ಚಳವಾಗಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತೆ ಬೇಡಿಕೆ ಕಂಡುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 23ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 737.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,200 ರೂ
  • ಚೆನ್ನೈ: 54,600 ರೂ
  • ಮುಂಬೈ: 54,200 ರೂ
  • ದೆಹಲಿ: 54,300 ರೂ
  • ಕೋಲ್ಕತಾ: 54,200 ರೂ
  • ಕೇರಳ: 54,200 ರೂ
  • ಅಹ್ಮದಾಬಾದ್: 54,100 ರೂ
  • ಜೈಪುರ್: 54,300 ರೂ
  • ಲಕ್ನೋ: 54,300 ರೂ
  • ಭುವನೇಶ್ವರ್: 54,200 ರೂ

ಇದನ್ನೂ ಓದಿ: ಟಾಟಾ ಗ್ರೂಪ್ ಮಾಲಕತ್ವದ ಕ್ಯಾರಟ್​ಲೇನ್ ಕಂಪನಿಯ ಉದ್ಯೋಗಿಗಳಿಗೆ ಸಿಗಲಿದೆ 340 ಕೋಟಿ ರೂ ಮೊತ್ತದ ಪಾಲು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,810 ರಿಂಗಿಟ್ (50,203 ರುಪಾಯಿ)
  • ದುಬೈ: 2130 ಡಿರಾಮ್ (48,083 ರುಪಾಯಿ)
  • ಅಮೆರಿಕ: 590 ಡಾಲರ್ (49,014 ರುಪಾಯಿ)
  • ಸಿಂಗಾಪುರ: 800 ಸಿಂಗಾಪುರ್ ಡಾಲರ್ (48,989 ರುಪಾಯಿ)
  • ಕತಾರ್: 2,200 ಕತಾರಿ ರಿಯಾಲ್ (50,124 ರೂ)
  • ಓಮನ್: 232 ಒಮಾನಿ ರಿಯಾಲ್ (50,093 ರುಪಾಯಿ)
  • ಕುವೇತ್: 182.50 ಕುವೇತಿ ದಿನಾರ್ (49,208 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,375 ರೂ
  • ಚೆನ್ನೈ: 7,800 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!