ಬೆಂಗಳೂರು, ಆಗಸ್ಟ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಏರುಮುಖದಲ್ಲಿ ಮುಂದುವರಿಯುತ್ತವೆ. ಭಾರತದಲ್ಲಿ ಚಿನ್ನದ ಬೆಲೆ ಎಲ್ಲೆಡೆ ಏರಿದೆ. ವಿದೇಶಗಳ ಪ್ರಮುಖ ಮಾರುಕಟ್ಟೆಗಳಲ್ಲೂ ಚಿನ್ನ ತುಟ್ಟಿಯಾಗಿದೆ. ಬೆಳ್ಳಿ ಬೆಲೆಗಳೂ ಎಲ್ಲೆಡೆ ಹೆಚ್ಚಳವಾಗಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತೆ ಬೇಡಿಕೆ ಕಂಡುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,375 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಟಾಟಾ ಗ್ರೂಪ್ ಮಾಲಕತ್ವದ ಕ್ಯಾರಟ್ಲೇನ್ ಕಂಪನಿಯ ಉದ್ಯೋಗಿಗಳಿಗೆ ಸಿಗಲಿದೆ 340 ಕೋಟಿ ರೂ ಮೊತ್ತದ ಪಾಲು
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ