AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25 August: ಚಿನ್ನ ಮತ್ತು ಬೆಳ್ಳಿ ಬೆಲೆ ಸಖತ್ ಹೆಚ್ಚಳ; ಇಲ್ಲಿದೆ ಇವತ್ತಿನ ಬೆಲೆ ಪಟ್ಟಿ

Bullion Market 2023, August 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 August: ಚಿನ್ನ ಮತ್ತು ಬೆಳ್ಳಿ ಬೆಲೆ ಸಖತ್ ಹೆಚ್ಚಳ; ಇಲ್ಲಿದೆ ಇವತ್ತಿನ ಬೆಲೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 25, 2023 | 5:30 AM

Share

ಬೆಂಗಳೂರು, ಆಗಸ್ಟ್ 25: ಚಿನ್ನ ಮತ್ತು ಬೆಳ್ಳಿ (Gold and Silver Rates) ಭರ್ಜರಿ ಬೆಲೆ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಮಾತ್ರವಲ್ಲ, ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನ ದುಬಾರಿಯಾಗಿದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ಇದೆ. ಬೆಳ್ಳಿಗೂ ಒಳ್ಳೆಯ ಡಿಮ್ಯಾಂಡ್ ಇದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 769 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,830 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ: Arecanut Price 24 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (50,520 ರುಪಾಯಿ)
  • ದುಬೈ: 2152.50 ಡಿರಾಮ್ (48,412 ರುಪಾಯಿ)
  • ಅಮೆರಿಕ: 590 ಡಾಲರ್ (48,712 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,316 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,381 ರೂ)
  • ಓಮನ್: 235 ಒಮಾನಿ ರಿಯಾಲ್ (50,496 ರುಪಾಯಿ)
  • ಕುವೇತ್: 184.50 ಕುವೇತಿ ದಿನಾರ್ (49,423 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 8,000 ರೂ
  • ಮುಂಬೈ: 7,690 ರೂ
  • ದೆಹಲಿ: 7,690 ರೂ
  • ಕೋಲ್ಕತಾ: 7,690 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,690 ರೂ
  • ಜೈಪುರ್: 7,690 ರೂ
  • ಲಕ್ನೋ: 7,690 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು