Gold Silver Price on 26 August: ಕೆಲವೆಡೆ ಚಿನ್ನದ ಬೆಲೆ ಇಳಿಕೆ; ಭಾರತದೆಲ್ಲೆಡೆ ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2023, August 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26 August: ಕೆಲವೆಡೆ ಚಿನ್ನದ ಬೆಲೆ ಇಳಿಕೆ; ಭಾರತದೆಲ್ಲೆಡೆ ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 26, 2023 | 5:00 AM

ಬೆಂಗಳೂರು, ಆಗಸ್ಟ್ 26: ಈ ವಾರ ಭರ್ಜರಿಯಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ (Gold and Silver Rates) ಬೆಲೆಗಳು ವೀಕೆಂಡ್​ನಲ್ಲಿ ಸಮಾಧಾನಗೊಂಡಿವೆ. ದುಬೈ ಮೊದಲಾದ ಕೆಲಡೆವೆ ಚಿನ್ನದ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೂ ಬೆಳ್ಳಿ ಬೆಲೆ ತಗ್ಗಿದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ಮುಂದಿನ ವಾರ ಮುಂದುವರಿಯಬಹುದು. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,830 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ: Arecanut Price 25 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (50,520 ರುಪಾಯಿ)
  • ದುಬೈ: 2147.50 ಡಿರಾಮ್ (48,267 ರುಪಾಯಿ)
  • ಅಮೆರಿಕ: 590 ಡಾಲರ್ (48,712 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,336 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (50,302 ರೂ)
  • ಓಮನ್: 235 ಒಮಾನಿ ರಿಯಾಲ್ (50,496 ರುಪಾಯಿ)
  • ಕುವೇತ್: 184.50 ಕುವೇತಿ ದಿನಾರ್ (49,423 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,950 ರೂ
  • ಮುಂಬೈ: 7,640 ರೂ
  • ದೆಹಲಿ: 7,640 ರೂ
  • ಕೋಲ್ಕತಾ: 7,640 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,640 ರೂ
  • ಜೈಪುರ್: 7,640 ರೂ
  • ಲಕ್ನೋ: 7,640 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್