Gold Silver Price on 27th August: ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ, ವಿದೇಶಗಳಲ್ಲಿ ಚಿನ್ನ ತುಸು ಅಗ್ಗ

Bullion Market 2024 August 27th: ಹಲವು ದೇಶಗಳಲ್ಲಿ ಚಿನ್ನದ ಬೆಲೆ ತುಸು ಏರಿದೆ. ಕೆಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ7,304 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. 88 ರೂ ಇದ್ದದ್ದು 87.90 ರೂಗೆ ಬಂದಿದೆ.

Gold Silver Price on 27th August: ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ, ವಿದೇಶಗಳಲ್ಲಿ ಚಿನ್ನ ತುಸು ಅಗ್ಗ
ಚಿನ್ನ

Updated on: Aug 27, 2024 | 5:00 AM

ಬೆಂಗಳೂರು, ಆಗಸ್ಟ್ 27: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ವಿದೇಶಗಳಲ್ಲಿ ಹಲವೆಡೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಮಂಗಳವಾರ ಯಥಾಸ್ಥಿತಿ ಹೊಂದಿದೆ. ಕಳೆದ ಕೆಲ ದಿನಗಳ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಹಬದಿಗೆ ಬಂದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,790 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,440 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 879 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 844 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,950 ರೂ
  • ಚೆನ್ನೈ: 66,950 ರೂ
  • ಮುಂಬೈ: 66,950 ರೂ
  • ದೆಹಲಿ: 67,100 ರೂ
  • ಕೋಲ್ಕತಾ: 66,950 ರೂ
  • ಕೇರಳ: 66,950 ರೂ
  • ಅಹ್ಮದಾಬಾದ್: 67,000 ರೂ
  • ಜೈಪುರ್: 67,100 ರೂ
  • ಲಕ್ನೋ: 67,100 ರೂ
  • ಭುವನೇಶ್ವರ್: 66,950 ರೂ

ಇದನ್ನೂ ಓದಿ: ಜೊಮಾಟೊದಲ್ಲಿ ಹೊಸ ಫೀಚರ್; ಆರ್ಡರ್ ಶೆಡ್ಯೂಲ್ ಮಾಡಿ; ಎರಡು ದಿನದವರೆಗೆ ಅವಕಾಶ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (66,550 ರುಪಾಯಿ)
  • ದುಬೈ: 2,832.50 ಡಿರಾಮ್ (64,700 ರುಪಾಯಿ)
  • ಅಮೆರಿಕ: 765 ಡಾಲರ್ (64,180 ರುಪಾಯಿ)
  • ಸಿಂಗಾಪುರ: 1,022 ಸಿಂಗಾಪುರ್ ಡಾಲರ್ (65,820 ರುಪಾಯಿ)
  • ಕತಾರ್: 2,860 ಕತಾರಿ ರಿಯಾಲ್ (65,810 ರೂ)
  • ಸೌದಿ ಅರೇಬಿಯಾ: 2,890 ಸೌದಿ ರಿಯಾಲ್ (64,620 ರುಪಾಯಿ)
  • ಓಮನ್: 3045 ಒಮಾನಿ ರಿಯಾಲ್ (66,350 ರುಪಾಯಿ)
  • ಕುವೇತ್: 229.30 ಕುವೇತಿ ದಿನಾರ್ (62,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,440 ರೂ
  • ಚೆನ್ನೈ: 9,290 ರೂ
  • ಮುಂಬೈ: 8,790 ರೂ
  • ದೆಹಲಿ: 8,790 ರೂ
  • ಕೋಲ್ಕತಾ: 8,790 ರೂ
  • ಕೇರಳ: 9,290 ರೂ
  • ಅಹ್ಮದಾಬಾದ್: 8,790 ರೂ
  • ಜೈಪುರ್: 8,790 ರೂ
  • ಲಕ್ನೋ: 8,790 ರೂ
  • ಭುವನೇಶ್ವರ್: 9,290 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us