Gold Silver Price on 28 August: ದುಬೈ ಮೊದಲಾದೆಡೆ ಚಿನ್ನ ಅಲ್ಪ ಇಳಿಕೆ; ಭಾರತದೆಲ್ಲೆಡೆ ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, August 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 August: ದುಬೈ ಮೊದಲಾದೆಡೆ ಚಿನ್ನ ಅಲ್ಪ ಇಳಿಕೆ; ಭಾರತದೆಲ್ಲೆಡೆ ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: Aug 28, 2023 | 5:00 AM

ಬೆಂಗಳೂರು, ಆಗಸ್ಟ್ 28: ಕೆಲ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಿರುವ ಚಿನ್ನ ಭಾರತದಲ್ಲಿ (Gold and Silver Rates) ಯಥಾಸ್ಥಿತಿಯಲ್ಲಿದೆ. ಆದರೆ, ಬೆಳ್ಳಿ ಬೆಲೆ ಮತ್ತೆ ಹೆಚ್ಚಳಗೊಂಡಿದೆ. ದುಬೈ, ಸಿಂಗಾಪುರ ಮೊದಲಾದೆಡೆ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಆಗಿರುವುದು ಬಿಟ್ಟರೆ ಹಳದಿ ಲೋಹದ ಬೆಲೆಯಲ್ಲಿ ಅಂತಹ ಪ್ರಮುಖ ವ್ಯತ್ಯಾಸಗಳಾಗಿಲ್ಲ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ಮುಂದಿನ ವಾರ ಮುಂದುವರಿಯಬಹುದು. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 28ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 769 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,830 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ: ಭಾರತದ ಫಾರೆಕ್ಸ್ ಮೀಸಲು ನಿಧಿಯಲ್ಲಿ ಭಾರೀ ಇಳಿಕೆ; 600 ಬಿಲಿಯನ್ ಡಾಲರ್ ಮಟ್ಟಕ್ಕಿಂತ ಕಡಿಮೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (50,418 ರುಪಾಯಿ)
  • ದುಬೈ: 2147.50 ಡಿರಾಮ್ (48,331 ರುಪಾಯಿ)
  • ಅಮೆರಿಕ: 590 ಡಾಲರ್ (48,772 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,255 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,231 ರೂ)
  • ಓಮನ್: 234.50 ಒಮಾನಿ ರಿಯಾಲ್ (50,346 ರುಪಾಯಿ)
  • ಕುವೇತ್: 184.50 ಕುವೇತಿ ದಿನಾರ್ (49,418 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 8,000 ರೂ
  • ಮುಂಬೈ: 7,690 ರೂ
  • ದೆಹಲಿ: 7,690 ರೂ
  • ಕೋಲ್ಕತಾ: 7,690 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,690 ರೂ
  • ಜೈಪುರ್: 7,690 ರೂ
  • ಲಕ್ನೋ: 7,640 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us