Gold Silver Price on 29 August: ನಿನ್ನೆ ವಿದೇಶಗಳಲ್ಲಿ, ಇವತ್ತು ಭಾರತದಲ್ಲಿ ಚಿನ್ನದ ಬೆಲೆ ಅಲ್ಪ ಇಳಿಕೆ; ಬೆಳ್ಳಿ ದರ ಯಥಾಸ್ಥಿತಿಯಲ್ಲಿ; ಇಲ್ಲಿದೆ ಬೆಲೆ ಪಟ್ಟಿ
Bullion Market 2023, August 29th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 76.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಆಗಸ್ಟ್ 29: ನಿನ್ನೆ ಕೆಲ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು (Gold and Silver Rates) ಭಾರತದಲ್ಲಿ ಇಂದು ಇಳಿದಿವೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ಮುಂದಿನ ವಾರ ಮುಂದುವರಿಯಬಹುದು. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 29ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 769 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 54,450 ರೂ
- ಚೆನ್ನೈ: 54,750 ರೂ
- ಮುಂಬೈ: 54,450 ರೂ
- ದೆಹಲಿ: 54,600 ರೂ
- ಕೋಲ್ಕತಾ: 54,450 ರೂ
- ಕೇರಳ: 54,450 ರೂ
- ಅಹ್ಮದಾಬಾದ್: 54,500 ರೂ
- ಜೈಪುರ್: 54,600 ರೂ
- ಲಕ್ನೋ: 54,600 ರೂ
- ಭುವನೇಶ್ವರ್: 54,450 ರೂ
ಇದನ್ನೂ ಓದಿ: Arecanut Price 28 August: ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,830 ರಿಂಗಿಟ್ (50,238 ರುಪಾಯಿ)
- ದುಬೈ: 2147.50 ಡಿರಾಮ್ (48,309 ರುಪಾಯಿ)
- ಅಮೆರಿಕ: 590 ಡಾಲರ್ (48,750 ರುಪಾಯಿ)
- ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,222 ರುಪಾಯಿ)
- ಕತಾರ್: 2,215 ಕತಾರಿ ರಿಯಾಲ್ (50,211 ರೂ)
- ಓಮನ್: 234.50 ಒಮಾನಿ ರಿಯಾಲ್ (50,326 ರುಪಾಯಿ)
- ಕುವೇತ್: 184.50 ಕುವೇತಿ ದಿನಾರ್ (49,419 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,550 ರೂ
- ಚೆನ್ನೈ: 8,000 ರೂ
- ಮುಂಬೈ: 7,690 ರೂ
- ದೆಹಲಿ: 7,690 ರೂ
- ಕೋಲ್ಕತಾ: 7,690 ರೂ
- ಕೇರಳ: 8,000 ರೂ
- ಅಹ್ಮದಾಬಾದ್: 7,690 ರೂ
- ಜೈಪುರ್: 7,690 ರೂ
- ಲಕ್ನೋ: 7,640 ರೂ
- ಭುವನೇಶ್ವರ್: 8,000 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:01 am, Tue, 29 August 23