ಬೆಂಗಳೂರು, ಆಗಸ್ಟ್ 29: ನಿನ್ನೆ ಕೆಲ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು (Gold and Silver Rates) ಭಾರತದಲ್ಲಿ ಇಂದು ಇಳಿದಿವೆ. ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ಮುಂದಿನ ವಾರ ಮುಂದುವರಿಯಬಹುದು. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 28 August: ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ, ಕೋಕೋ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:01 am, Tue, 29 August 23