ಬೆಂಗಳೂರು, ಆಗಸ್ಟ್ 2: ಚಿನ್ನ ಮತ್ತು ಬೆಳ್ಳಿ ಬೆಲೆ (Gold Rates) ಏರಿಕೆಯಾಗಿದೆ. ಚಿನ್ನದ ಬೆಲೆ ಏರಿಕೆಯ ಗತಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಸತತವಾಗಿ ಹೆಚ್ಚಳವಾಗಬಹುದು ಎಂದು ಹೇಳಲಾಗುತ್ತಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಏರಿಕೆಯ ಹಾದಿಯಲ್ಲಿ ಮುಂದುವರಿಯುವ ನಿರೀಕ್ಷೆ ಇದೆ. ಮಾರುಕಟ್ಟೆ ತಜ್ಞರ ಪ್ರಕಾರ ಚಿನ್ನವನ್ನು ಖರೀದಿಸಬೇಕೆನ್ನುವವರು ಈಗಲೇ ಹೂಡಿಕೆ ನಡೆಸುವುದು ಉತ್ತಮ ಎನ್ನಲಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Loan: ಬೆಲೆ ಏರಿಕೆಯ ಬಿಸಿಯಲ್ಲಿ ಜೀವನ ನಡೆಸಲು ಸಾಲದ ಮೊರೆಹೋದ ಜನರು; ಕುತೂಹಲಕಾರಿ ಅಂಕಿಅಂಶಗಳು ಇಲ್ಲಿವೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ