AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 2nd August: ಚಿನ್ನ, ಬೆಳ್ಳಿಗೆ ಹೆಚ್ಚಿದ ಬೇಡಿಕೆ; ಸತತವಾಗಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 August 2nd: ಚಿನ್ನದ ಬೆಲೆ ಸತತವಾಗಿ ಹೆಚ್ಚುತ್ತಿದೆ. ಆಭರಣ ಚಿನ್ನ ಗ್ರಾಮ್​ಗೆ 6,450 ರೂ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,036 ರೂ ಆಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಏರಿಕೆ ಆಗಿದೆ.

Gold Silver Price on 2nd August: ಚಿನ್ನ, ಬೆಳ್ಳಿಗೆ ಹೆಚ್ಚಿದ ಬೇಡಿಕೆ; ಸತತವಾಗಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 02, 2024 | 5:00 AM

Share

ಬೆಂಗಳೂರು, ಆಗಸ್ಟ್ 2: ಚಿನ್ನ ಮತ್ತು ಬೆಳ್ಳಿಗಳಿಗೆ ಮತ್ತೆ ಬೇಡಿಕೆ ಕುದುರಿದೆ. ಈ ಎರಡೂ ಲೋಹಗಳ ಬೆಲೆ ಸತತವಾಗಿ ಹೆಚ್ಚುತ್ತಿದೆ. ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 60 ಪೈಸೆ ಜಾಸ್ತಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,000 ರೂ ದಾಟಿದೆ. ಸತತ ಮೂರನೇ ದಿನ ಚಿನ್ನದ ಬೆಲೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 871 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 855 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,500 ರೂ
  • ಚೆನ್ನೈ: 64,300 ರೂ
  • ಮುಂಬೈ: 64,500 ರೂ
  • ದೆಹಲಿ: 64,650 ರೂ
  • ಕೋಲ್ಕತಾ: 64,500 ರೂ
  • ಕೇರಳ: 64,500 ರೂ
  • ಅಹ್ಮದಾಬಾದ್: 64,550 ರೂ
  • ಜೈಪುರ್: 64,650 ರೂ
  • ಲಕ್ನೋ: 64,650 ರೂ
  • ಭುವನೇಶ್ವರ್: 64,500 ರೂ

ಇದನ್ನೂ ಓದಿ: ಜಿಎಸ್​ಟಿ ಪೋರ್ಟಲ್​ನಲ್ಲಿ ಈಗ ತೆರಿಗೆ ಸಂಗ್ರಹ ಮತ್ತಿತರ ದಾಖಲೆಗಳು ಲಭ್ಯ; ಜುಲೈನಲ್ಲಿ 1.82 ಲಕ್ಷ ಕೋಟಿ ರೂ ತೆರಿಗೆ ಸಂಗ್ರಹ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,530 ರಿಂಗಿಟ್ (64,700 ರುಪಾಯಿ)
  • ದುಬೈ: 2,750 ಡಿರಾಮ್ (62,680 ರುಪಾಯಿ)
  • ಅಮೆರಿಕ: 740 ಡಾಲರ್ (61,960 ರುಪಾಯಿ)
  • ಸಿಂಗಾಪುರ: 1020 ಸಿಂಗಾಪುರ್ ಡಾಲರ್ (63,680 ರುಪಾಯಿ)
  • ಕತಾರ್: 2,790 ಕತಾರಿ ರಿಯಾಲ್ (64,060 ರೂ)
  • ಸೌದಿ ಅರೇಬಿಯಾ: 2,800 ಸೌದಿ ರಿಯಾಲ್ (62,470 ರುಪಾಯಿ)
  • ಓಮನ್: 300 ಒಮಾನಿ ರಿಯಾಲ್ (64,150 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (61,150 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,550 ರೂ
  • ಚೆನ್ನೈ: 9,170 ರೂ
  • ಮುಂಬೈ: 8,710 ರೂ
  • ದೆಹಲಿ: 8,710 ರೂ
  • ಕೋಲ್ಕತಾ: 8,710 ರೂ
  • ಕೇರಳ: 9,170 ರೂ
  • ಅಹ್ಮದಾಬಾದ್: 8,710 ರೂ
  • ಜೈಪುರ್: 8,710 ರೂ
  • ಲಕ್ನೋ: 8,710 ರೂ
  • ಭುವನೇಶ್ವರ್: 9,170 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ