AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30 August: ಚಿನ್ನ ಮತ್ತು ಬೆಳ್ಳಿ ಬೆಲೆ ಸಖತ್ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ ದುಬಾರಿ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ

Bullion Market 2023, August 30th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,690 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30 August: ಚಿನ್ನ ಮತ್ತು ಬೆಳ್ಳಿ ಬೆಲೆ ಸಖತ್ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ ದುಬಾರಿ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 30, 2023 | 5:00 AM

Share

ಬೆಂಗಳೂರು, ಆಗಸ್ಟ್ 30: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಭರ್ಜರಿಯಾಗಿ ಹೆಚ್ಚಾಗಿವೆ. ಭಾರತದಾದ್ಯಂತ ಚಿನ್ನದ ಬೆಲೆ ಏರಿದೆ. ನಿನ್ನೆ ಯಥಾಸ್ಥಿತಿಯಲ್ಲಿದ್ದ ಬೆಳ್ಳಿ ಬೆಲೆ ಇಂದು ಹೆಚ್ಚಳಗೊಂಡಿದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ನಿರೀಕ್ಷೆಯಂತೆ ಈ ವಾರ ಮುಂದುವರಿಯುತ್ತಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 75.75 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,700 ರೂ
  • ಚೆನ್ನೈ: 55,200 ರೂ
  • ಮುಂಬೈ: 54,700 ರೂ
  • ದೆಹಲಿ: 54,850 ರೂ
  • ಕೋಲ್ಕತಾ: 54,700 ರೂ
  • ಕೇರಳ: 54,700 ರೂ
  • ಅಹ್ಮದಾಬಾದ್: 54,750 ರೂ
  • ಜೈಪುರ್: 54,850 ರೂ
  • ಲಕ್ನೋ: 54,850 ರೂ
  • ಭುವನೇಶ್ವರ್: 54,700 ರೂ

ಇದನ್ನೂ ಓದಿ: Arecanut Price 29 August: ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (50,617 ರುಪಾಯಿ)
  • ದುಬೈ: 2157.50 ಡಿರಾಮ್ (48,636 ರುಪಾಯಿ)
  • ಅಮೆರಿಕ: 590 ಡಾಲರ್ (48,847 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,435 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,537 ರೂ)
  • ಓಮನ್: 234.50 ಒಮಾನಿ ರಿಯಾಲ್ (50,430 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,782 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,575 ರೂ
  • ಚೆನ್ನೈ: 8,020 ರೂ
  • ಮುಂಬೈ: 7,710 ರೂ
  • ದೆಹಲಿ: 7,710 ರೂ
  • ಕೋಲ್ಕತಾ: 7,710 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,710 ರೂ
  • ಜೈಪುರ್: 7,710 ರೂ
  • ಲಕ್ನೋ: 7,710 ರೂ
  • ಭುವನೇಶ್ವರ್: 8,020 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್