AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 04 August: ಚಿನ್ನ ಮತ್ತು ಬೆಳ್ಳಿ ಏರಿಳಿತದ ಹಾದಿಯಲ್ಲಿ; ಕಡಿಮೆಗೊಂಡ ಅಮೂಲ್ಯ ಲೋಹಗಳ ಬೆಲೆ; ಇಲ್ಲಿದೆ ದರ ಪಟ್ಟಿ

Bullion Market 2023, August 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 04 August: ಚಿನ್ನ ಮತ್ತು ಬೆಳ್ಳಿ ಏರಿಳಿತದ ಹಾದಿಯಲ್ಲಿ; ಕಡಿಮೆಗೊಂಡ ಅಮೂಲ್ಯ ಲೋಹಗಳ ಬೆಲೆ; ಇಲ್ಲಿದೆ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 04, 2023 | 5:00 AM

Share

ಬೆಂಗಳೂರು, ಆಗಸ್ಟ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ಮತ್ತೆ ಇಳಿದಿವೆ. ಅಮೆರಿಕಕ್ಕೆ ಫಿಚ್ ರೇಟಿಂಗ್ ಕಡಿಮೆ ಆದರೂ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿಲ್ಲ. ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ದೇಶ ವಿದೇಶಗಳ ಮಾರುಕಟ್ಟೆಯಲ್ಲಿ ಇಳಿದಿದೆ. ಈ ಏರಿಳಿತದ ಹಾದಿ ಇನ್ನೂ ಕೆಲ ವಾರ ಮುಂದುವರಿದು, ಆ ಬಳಿಕ ಸತತ ಏರಿಕೆಗೆ ಜಾರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,350 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ

ಇದನ್ನೂ ಓದಿ: Arecanut Price 3 August: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಕೋಕೋ ಮತ್ತು ಅಡಿಕೆ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,575 ರುಪಾಯಿ)
  • ದುಬೈ: 2172.50 ಡಿರಾಮ್ (48,965 ರುಪಾಯಿ)
  • ಅಮೆರಿಕ: 595 ಡಾಲರ್ (49,138 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,997 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (50,819 ರೂ)
  • ಓಮನ್: 236.50 ಒಮಾನಿ ರಿಯಾಲ್ (50,853 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 7,850 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ