Gold Silver Price on 05 August: ದುಬೈನಲ್ಲಿ ಚಿನ್ನ ಇನ್ನೂ ಅಗ್ಗ; ಭಾರತದಲ್ಲಿ ಬೆಳ್ಳಿ ಬೆಲೆ ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ವಿವರ

Bullion Market 2023, August 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 05 August: ದುಬೈನಲ್ಲಿ ಚಿನ್ನ ಇನ್ನೂ ಅಗ್ಗ; ಭಾರತದಲ್ಲಿ ಬೆಳ್ಳಿ ಬೆಲೆ ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ವಿವರ
ಚಿನ್ನ

Updated on: Aug 05, 2023 | 5:02 AM

ಬೆಂಗಳೂರು, ಆಗಸ್ಟ್ 5: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ವಿದೇಶಗಳಲ್ಲಿ ಚಿನ್ನದ ಬೆಲೆ (Gold Rates) ಕಡಿಮೆ ಆಗಿದೆ. ದುಬೈ, ಓಮನ್, ಕುವೇತ್ ಮೊದಲಾದ ಕಡೆ ಚಿನ್ನದ ಬೆಲೆ ಕುಸಿತವಾಗಿದೆ. ಈ ಏರಿಳಿತದ ಹಾದಿ ಇನ್ನೂ ಕೆಲ ವಾರ ಮುಂದುವರಿದು, ಆ ಬಳಿಕ ಸತತ ಏರಿಕೆಗೆ ಜಾರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 5ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,350 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ

ಇದನ್ನೂ ಓದಿ: Arecanut Price 4 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,575 ರುಪಾಯಿ)
  • ದುಬೈ: 2167.50 ಡಿರಾಮ್ (48,901 ರುಪಾಯಿ)
  • ಅಮೆರಿಕ: 595 ಡಾಲರ್ (49,138 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,927 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (50,819 ರೂ)
  • ಓಮನ್: 236.50 ಒಮಾನಿ ರಿಯಾಲ್ (50,907 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,118 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,820 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,820 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,480 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us