Gold Silver Price on 07 August: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ತುಸು ದುಬಾರಿ; ದುಬೈ ಸೇರಿ ಕೆಲ ವಿದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳ

|

Updated on: Aug 07, 2023 | 5:05 AM

Bullion Market 2023, August 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 07 August: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ತುಸು ದುಬಾರಿ; ದುಬೈ ಸೇರಿ ಕೆಲ ವಿದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳ
ಚಿನ್ನ
Follow us on

ಬೆಂಗಳೂರು, ಆಗಸ್ಟ್ 7: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold Rates) ತುಸು ವ್ಯತ್ಯಯವಾಗಿದೆ. ಭಾರತದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ದುಬೈ, ಓಮನ್ ಇತ್ಯಾದಿ ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತದ ಹಾದಿ ಈ ವಾರವೂ ಮುಂದುವರಿಯುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,510 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 751 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,550 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: Forex: ಭಾರತದ ವಿದೇಶ ವಿನಿಮಯ ಮೀಸಲು ನಿಧಿ ಎಷ್ಟು ಉಪಯುಕ್ತ? ಭವಿಷ್ಯದ ದಿನಗಳು ಹೇಗಿವೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,575 ರುಪಾಯಿ)
  • ದುಬೈ: 2180 ಡಿರಾಮ್ (48,901 ರುಪಾಯಿ)
  • ಅಮೆರಿಕ: 595 ಡಾಲರ್ (49,138 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,927 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (50,819 ರೂ)
  • ಓಮನ್: 237.50 ಒಮಾನಿ ರಿಯಾಲ್ (50,907 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,118 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,850 ರೂ
  • ಮುಂಬೈ: 7,510 ರೂ
  • ದೆಹಲಿ: 7,510 ರೂ
  • ಕೋಲ್ಕತಾ: 7,510 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,510 ರೂ
  • ಜೈಪುರ್: 7,510 ರೂ
  • ಲಕ್ನೋ: 7,510 ರೂ
  • ಭುವನೇಶ್ವರ್: 7,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ