
ಬೆಂಗಳೂರು, ಆಗಸ್ಟ್ 7: ಜಾಗತಿಕ ಮಾರುಕಟ್ಟೆ ತುಮುಲಗಳು ಚಿನಿವಾರ ಪೇಟೆಯ ಮೇಲೂ ಪರಿಣಾಮ ಬೀರಿದೆ. ಚಿನ್ನ, ಬೆಳ್ಳಿ ಇತ್ಯಾದಿ ಲೋಹಗಳ ಬೆಲೆಗಳು ಸತತವಾಗಿ ಕಡಿಮೆ ಆಗುತ್ತಿವೆ. ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಹೆಚ್ಚು ವೇಗ ಪಡೆದಿದೆ. ಮಲೇಷ್ಯಾಕ್ಕಿಂತ ಭಾರತದಲ್ಲಿ ಚಿನ್ನ ಈಗ ಹೆಚ್ಚು ಅಗ್ಗ ಎನಿಸಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ಗೆ 90 ರೂನಷ್ಟು ಕಡಿಮೆ ಆದರೆ, ಬೆಳ್ಳಿಯಂತೂ ಗ್ರಾಮ್ಗೆ 3 ರೂಗೂ ಹೆಚ್ಚು ಮೊತ್ತದಷ್ಟು ಬೆಲೆ ತಗ್ಗಿಸಿಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ನಿಮಗೆ ರೀಫಂಡ್ ಆಗಿದೆ ಎಂದು ಬಂದ ಮೆಸೇಜ್ನಲ್ಲಿರುವ ಲಿಂಕ್ ಕ್ಲಿಕ್ ಮಾಡದಿರಿ, ಜೋಕೆ; ಐಟಿ ಇಲಾಖೆ ಎಚ್ಚರಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ