AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 08 August: ದುಬೈ ಮೊದಲಾದೆಡೆ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಬೆಳ್ಳಿ ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ

Bullion Market 2023, August 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 08 August: ದುಬೈ ಮೊದಲಾದೆಡೆ ತಗ್ಗಿದ ಚಿನ್ನದ ಬೆಲೆ; ಭಾರತದಲ್ಲಿ ಬೆಳ್ಳಿ ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 08, 2023 | 5:04 AM

Share

ಬೆಂಗಳೂರು, ಆಗಸ್ಟ್ 8: ಭಾರತದಲ್ಲಿ ಚಿನ್ನದ ಬೆಲೆ (Gold Rates) ಯಥಾಸ್ಥಿತಿಯಲ್ಲಿದ್ದರೂ ವಿದೇಶದ ಕೆಲವೆಡೆ ಬೆಲೆ ಇಳಿಕೆಯಾಗಿದೆ. ದುಬೈ, ಓಮನ್ ಮೊದಲಾದ ಕಡೆ ಚಿನ್ನದ ಬೆಲೆ ಇಳಿದಿದೆ. ಭಾರತದಲ್ಲೂ ಇದರ ಬೆಲೆ ಇಂದು ಇಳಿಕೆಯಾಗುವ ನಿರೀಕ್ಷೆ ಇದೆ. ಇದೇ ವೇಳೆ ಬೆಳ್ಳಿ ಬೆಲೆ ತುಸು ತಗ್ಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಬೆಲೆ ಗ್ರಾಂಗೆ 75 ರೂ ಇದೆ. ಬೆಂಗಳೂರಿನಲ್ಲಿ ರಜತದ ಬೆಲೆ ಗ್ರಾಂಗೆ 74 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,550 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: Arecanut Price 7 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,517 ರುಪಾಯಿ)
  • ದುಬೈ: 2172.50 ಡಿರಾಮ್ (48,934 ರುಪಾಯಿ)
  • ಅಮೆರಿಕ: 595 ಡಾಲರ್ (49,226 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,969 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (51,007 ರೂ)
  • ಓಮನ್: 237 ಒಮಾನಿ ರಿಯಾಲ್ (50,925 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,317 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,830 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,830 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,830 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ